Select Your Language

Notifications

webdunia
webdunia
webdunia
webdunia

ನವದೆಹಲಿ ರೈಲು ನಿಲ್ದಾಣ ಕಾಲ್ತುಳಿತ ಪ್ರಕರಣ: 33ಸಂತ್ರಸ್ತ ಕುಟುಂಬಗಳಿಗೆ ₹2ಕೋಟಿ ಘೋಷಣೆ

New Delhi station stampede

Sampriya

ನವದೆಹಲಿ , ಬುಧವಾರ, 12 ಮಾರ್ಚ್ 2025 (19:16 IST)
Photo Courtesy X
ನವದೆಹಲಿ: ಫೆಬ್ರವರಿ 15 ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಅಥವಾ ಗಾಯಗೊಂಡ 33 ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರ ₹2.01 ಕೋಟಿ ಪರಿಹಾರ ಬಿಡುಗಡೆ ಮಾಡಿದೆ.

ಮೃತರ ಹತ್ತಿರದ ಸಂಬಂಧಿಕರಿಗೆ ₹10 ಲಕ್ಷ, ತೀವ್ರವಾಗಿ ಗಾಯಗೊಂಡವರಿಗೆ ತಲಾ ₹2.50 ಲಕ್ಷ ಮತ್ತು ಸರಳ ಗಾಯಗೊಂಡವರಿಗೆ ತಲಾ ₹1 ಲಕ್ಷ ಪರಿಹಾರ ನೀಡಲಾಗಿದೆ" ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 15 ರ ಪ್ರಯಾಗ್‌ನಲ್ಲಿ ನಡೆದ ಕುಂಭಮೇಳದಲ್ಲಿ ಪಾಲ್ಗೊಳ್ಳುವ ಸಲುವಾಗಿ ನವದೆಹಲಿ ರೈಲು ನಿಲ್ದಾಣದಲ್ಲಿ ಅಪಾರ ಭಕ್ತರು ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿತು.

 ವೈಷ್ಣವ್ ಅವರು ಮೃತರ ಮತ್ತು ಗಾಯಗೊಂಡವರ ಸಂಖ್ಯೆಯನ್ನು ನೀಡಲಿಲ್ಲ, ಆದರೆ ಘಟನೆಯ ಅಧಿಕಾರಿಗಳು ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವೈಷ್ಣವ್ ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ್ ಚಿತ್ರಮಂದಿರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಪೀಠೋಪಕರಣ