Webdunia - Bharat's app for daily news and videos

Install App

ಅತ್ಯಂತ ಕಳಪೆ ಮಟ್ಟ ತಲುಪಿದ ನವದೆಹಲಿಯ ವಾಯು ಗುಣಮಟ್ಟ: ಹೆಚ್ಚಿದ ಆತಂಕ

Sampriya
ಗುರುವಾರ, 26 ಡಿಸೆಂಬರ್ 2024 (14:24 IST)
Photo Courtesy X
ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಅಂಕಿಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ(ಎಕ್ಯೂಐ) ಅತ್ಯಂತ ಕಳಪೆ ಮಟ್ಟದಲ್ಲಿದೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಎಕ್ಯೂಐ 340 ರಷ್ಟಿತ್ತು.

38 ನಿಗಾ ಕೇಂದ್ರಗಳ ಪೈಕಿ 32 ಕೇಂದ್ರಗಳಲ್ಲಿ ಎಕ್ಯೂಐ ಅತ್ಯಂತ ಕಳಪೆ ಹಂತದ ವ್ಯಾಪ್ತಿಯಲ್ಲಿದೆ ಎಂದು ಸಿಪಿಸಿಬಿ ಹೇಳಿದೆ.

ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ತೀವ್ರಕ್ಕಿಂತಲೂ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.

ಇನ್ನು ರಾಷ್ಟ್ರ ರಾಜಧಾನಿಯಲ್ಲಿ(ದೆಹಲಿ) ಶುಕ್ರವಾರ ಮತ್ತು ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೇ ಭಾನುವಾರ ಅತ್ಯಂತ ದಟ್ಟವಾದ ಮಂಜು ಆವರಿಸಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕನಿಷ್ಠ ತಾಪಮಾನವು 8.2 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ ಎಂದೂ ಐಎಂಡಿ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments