Daily Horoscope

Select Your Language

Notifications

webdunia
webdunia
webdunia
webdunia

ನಾಳೆಯಿಂದ ಹೊಸ ಆರ್ಥಿಕ ವರ್ಷ: ಏನೆಲ್ಲಾ ಬದಲಾವಣೆಗಳು ಆಗಲಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ

New Financial Year, Central Government, Income Tax Department
Photo Credit X
ಬೆಂಗಳೂರು: ದೇಶದಲ್ಲಿ ಏಪ್ರಿಲ್ 1ರಿಂದ ಮುಂದಿನ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದೆ.  ಹಣಕಾಸಿಗೆ ಸಂಬಂಧಿಸಿದ ಹಲವಾರು ಬದಲಾವಣೆಗಳು ನಾಳೆಯಿಂದ ಆಗಲಿದೆ.  ಈ ನಿಟ್ಟಿನಲ್ಲಿ ಗ್ರಾಹಕರಿಗೆ ಈ ಕುರಿತ ಮಾಹಿತಿ ಇಲ್ಲಿದೆ.

2026-27ರ ಹೊಸ ಆರ್ಥಿಕ ವರ್ಷ ಬುಧವಾರ ಪ್ರಾರಂಭವಾಗಲಿದ್ದು, ಹಲವಾರು ಪ್ರಮುಖ ಹಣಕಾಸು ಮತ್ತು ಬ್ಯಾಂಕಿಂಗ್ ನಿಯಮಗಳು ನಾಳೆಯಿಂದಲೇ ಜಾರಿಗೆ ಬರಲಿದೆ. ಈ ನಿಯಮಗಳು ತೆರಿಗೆದಾರರು, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರು, ಬ್ಯಾಂಕ್ ಗ್ರಾಹಕರು ಮತ್ತು ಡಿಜಿಟಲ್ ಪಾವತಿ ಬಳಕೆದಾರರ ವಹಿವಾಟುಗಳ ಮೇಲೆ ಪರಿಣಾಮ ಬೀರಲಿದೆ. 

ಯಾವುದೇ ಆದಾಯ ತೆರಿಗೆ ರಿಟರ್ನ್ ಬಗ್ಗೆ ವರದಿ ಮಾಡುವುದನ್ನು ತಪ್ಪಿಸಿಕೊಂಡಿದ್ದರೆ ನವೀಕರಿಸಿದ ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಿ. ಇದಕ್ಕಾಗಿ ಹೆಚ್ಚುವರಿ ತೆರಿಗೆ, ದಂಡ ಪಾವತಿಸಬೇಕಾಗಬಹುದು. ಆದರೆ ಇದು ಮುಂದೆ ಆದಾಯ ತೆರಿಗೆ ಇಲಾಖೆಯಿಂದ ಪರಿಶೀಲನೆಗೆ ಒಳಗಾಗುವುದನ್ನು ತಪ್ಪಿಸುತ್ತದೆ.

ಏಪ್ರಿಲ್ 1ರಿಂದ ಪ್ಯಾನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ದಾಖಲೆಗಳು ಬೇಕಾಗುತ್ತವೆ. ಮುಖ್ಯವಾಗಿ ಆಧಾರ್ ಆಧಾರಿತ ದೃಢೀಕರಣ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಇದಕ್ಕಾಗಿ ಪ್ಯಾನ್‌ ಕಾರ್ಡ್‌ನಲ್ಲಿರುವ ಹೆಸರು ಆಧಾರ್ ಕಾರ್ಡ್‌ನಲ್ಲಿರುವಂತೆಯೇ ಇರುತ್ತದೆ. ಅರ್ಜಿದಾರರು ತಮ್ಮ ಆಧಾರ್ ವಿವರಗಳು ಸರಿಯಾಗಿವೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳಬೇಕಾಗುತ್ತದೆ.

ಎಸ್‌ಬಿಐ ಕಾರ್ಡ್ ಗ್ರಾಹಕರು ಏಪ್ರಿಲ್ 1ರಿಂದ ರಿವಾರ್ಡ್ ಪಾಯಿಂಟ್‌ಗಳನ್ನು ಸ್ಟೇಟ್‌ಮೆಂಟ್ ಕ್ರೆಡಿಟ್ ಆಗಿ ಹೇಗೆ ಪರಿವರ್ತಿಸಬಹುದು ಎಂಬುದರ ಮೇಲೆ ಪರಿಷ್ಕೃತ ನಿಯಮಗಳು ಜಾರಿಗೆ ಬರಲಿದೆ. ಇದರ ಕುರಿತು ಸಂಪೂರ್ಣ ಮಾಹಿತಿಯು ಬ್ಯಾಂಕ್ ವೆಬ್ ಸೈಟ್ ನಲ್ಲಿ ಲಭ್ಯವಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 2026–27ರ ಹಣಕಾಸು ವರ್ಷದಲ್ಲಿ ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಅನ್ನು ಪರಿಷ್ಕರಿಸುವುದಾಗಿ ಘೋಷಿಸಿದೆ. ಹೆಚ್ಚಿನ ಶುಲ್ಕ ಏಪ್ರಿಲ್ 1ರಿಂದ ಅನ್ವಯವಾಗಲಿದೆ. ವಾರ್ಷಿಕ ಪಾಸ್‌ ಶುಲ್ಕವನ್ನು ₹ 3,000ಗಳಿಂದ ₹3,075ಕ್ಕೆ ಪರಿಷ್ಕರಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಿಸಿದೆ.

ರೂಪೇ ಪ್ಲಾಟಿನಂ ಡೆಬಿಟ್ ಕಾರ್ಡ್‌ದಾರರು ಏಪ್ರಿಲ್ 1ರಿಂದ ಉಚಿತವಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲು ಲಾಂಜ್‌ಗಳನ್ನು ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಇದಕ್ಕೆ ಸಂಬಂಧಿಸಿ ಕೆಲವು ನಿಯಮಗಳು ಜಾರಿಯಾಗಿವೆ. ವಿಮಾನ ನಿಲ್ದಾಣ ಅಥವಾ ರೈಲ್ವೆ ಲೌಂಜ್ ಪ್ರವೇಶ ಪ್ರಯೋಜನಗಳಿಗೆ ಅರ್ಹತೆ ಪಡೆಯಲು ಗ್ರಾಹಕರು ಬ್ಯಾಂಕ್ ನಿರ್ದಿಷ್ಟಪಡಿಸಿದ ಖರ್ಚು ಮಾನದಂಡಗಳನ್ನು ಪೂರೈಸಿರಬೇಕಾಗುತ್ತದೆ.

ಎಚ್‌ಡಿಎಫ್‌ಸಿ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಮತ್ತು ಬಂಧನ್ ಬ್ಯಾಂಕ್ ಸೇರಿದಂತೆ ಹಲವಾರು ಬ್ಯಾಂಕುಗಳು ಎಟಿಎಂ ನಗದು ಹಿಂಪಡೆಯುವಿಕೆ ನೀತಿ, ಶುಲ್ಕ ಮತ್ತು ನಿರ್ಬಂಧಗಳಿಗೆ ಮಾರ್ಪಾಡುಗಳನ್ನು ಘೋಷಿಸಿವೆ. ಪರಿಷ್ಕೃತ ಬದಲಾವಣೆಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿವೆ.

ಎಲ್ಲಾ ಡಿಜಿಟಲ್ ಪಾವತಿ ವಹಿವಾಟುಗಳು ದೃಢೀಕರಣದ ಎರಡು ಅಂಶಗಳನ್ನು ನಾಳೆಯಿಂದ ಪೂರೈಸಬೇಕು. ದೃಢೀಕರಣಕ್ಕಾಗಿ ಯಾವುದೇ ನಿರ್ದಿಷ್ಟ ಅಂಶವನ್ನು ಕಡ್ಡಾಯಗೊಳಿಸಲಾಗಿಲ್ಲವಾದರೂ ಡಿಜಿಟಲ್ ಪಾವತಿ ವ್ಯವಸ್ಥೆಯು ಪ್ರಾಥಮಿಕವಾಗಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಅನ್ನು ಹೆಚ್ಚುವರಿ ಅಂಶವಾಗಿ ಅಳವಡಿಸಿಕೊಂಡಿದೆ. 

ಬ್ಯಾಂಕಿಂಗ್ ಅಪ್ಲಿಕೇಶನ್ ಮೂಲಕ ಐದು ಲಕ್ಷಕ್ಕಿಂತ ಮೇಲ್ಪಟ್ಟು ಮಾಡುವ ಎಲ್ಲಾ ವಹಿವಾಟಿಗೆ ಆಧಾರ್ ಲಿಂಕ್, ಫಿಂಗರ್ ಪ್ರಿಂಟ್ ಅಥವಾ ಫೇಸ್ ಸ್ಕ್ಯಾನ್ ಮಾಡಲೇಬೇಕು. ಇಲ್ಲವಾದರೆ ಯಾವುದೇ ಪಾವತಿಯನ್ನು ಮಾಡಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆನ್ಲೈನ್ ಪಾವತಿಯ ವೇಳೆ ಹೆಚ್ಚುವರಿ ಪ್ರಶ್ನೆಗಳನ್ನು ಕೇಳಲಾಗುತ್ತದೆ.  

ಬ್ಯಾಂಕಿಂಗ್ ಅಪ್ಲಿಕೇಶನ್ ನಲ್ಲಿ ಬಿಹೇವಿಯರ್ ಬಯೋಮೆಟ್ರಿಕ್ಸ್ ಅನ್ನು ಅಳವಡಿಸಲಾಗಿದೆ. ಈ ಮೂಲಕ ಇನ್ನು ಮುಂದೆ ಗ್ರಾಹಕರು ಬ್ಯಾಂಕಿಂಗ್ ಅಪ್ಲಿಕೇಶನ್ ಬಳಸುವಾಗ ಅವರು ಟೈಪ್ ಮಾಡುವ ವಿಧಾನ, ವೇಗ, ಸ್ಕ್ರೀನ್ ನಿರ್ವಹಣೆ ಮೂಲಕ ಗ್ರಾಹಕರ ಗುರುತು ಪತ್ತೆ ಮಾಡಲಾಗುತ್ತದೆ.

ಇನ್ನು ಮುಂದೆ ಬ್ಯಾಂಕುಗಳು ತಮ್ಮ ಅಪ್ಲಿಕೇಶನ್‌ಗಳಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ವಹಿವಾಟುಗಳನ್ನು ಲಾಕ್ ಮಾಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಒಂದು ವೇಳೆ ಈ ಸಮಯದಲ್ಲಿ ವಹಿವಾಟು ನಡೆಸಲು ಯಾರಾದರೂ ಖಾತೆ ಹ್ಯಾಕ್ ಮಾಡಿದರೂ ಆನ್ಲೈನ್ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ.
 

Share this Story:

Follow Webdunia kannada

ಮುಂದಿನ ಸುದ್ದಿ

Video: ಮಂಗಳೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ ನಿಂದ ಬಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರು