ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ಭರವಸೆಯಲ್ಲಿದ್ದಾರೆ.
ಇಂದು ನವದೆಹಲಿಯಲ್ಲಿ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯಪ್ರವೇಶಿಸಬೇಕು ಎಂದು ಬೇಡಿಕೆ ಮುಂದಿಟ್ಟರು.
6 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅವರ ಕುಟುಂಬಗಳನ್ನು ಪ್ರತಿನಿಧಿಸುವ ಸಂಘದ ಪ್ರತಿನಿಧಿಗಳ ತಂಡ ಬೈಕ್ ಟ್ಯಾಕ್ಸಿ ಸೇವೆಯ ಸ್ಥಗಿತದಿಂದ ಉಂಟಾಗಿರುವ ಗಂಭೀರ ಜೀವನೋಪಾಯ ಸಂಕಷ್ಟ ಎದುರಿಸುತ್ತಿದೆ ಎಂದು ವಿವರಿಸಿದರು.
ಬೈಕ್ ಟ್ಯಾಕ್ಸಿ ಚಾಲಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಹುಲ್ ಗಾಂಧಿ, ಅವರಿಗೆ ಬೆಂಬಲದ ಭರವಸೆ ನೀಡಿದ್ದಾರೆ.