Publish Date: Sun, 03 Sep 2017 (11:18 IST)
Updated Date: Sun, 03 Sep 2017 (11:23 IST)
ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಹೊಸದಾಗಿ ಆಯ್ಕೆಯಾದ 9 ಮಂದಿ ನೂತನ ಸಚಿವರು ಇಂದು ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಅನಂತ್ ಕುಮಾರ್, ಸದಾನಂದ ಗೌಡ, ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಉಪಸ್ಥಿತರಿದ್ದರು.
ನೂತನ ಸಚಿವರಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. ರಾಜ್ಯದಿಂದ ಸಚಿವರಾಗಿ ಆಯ್ಕೆಯಾಗಿರುವ ಅನಂತ್ ಕುಮಾರ್ ಹೆಗ್ಡೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸದರೇ ಅಲ್ಲದ ಮಾಜಿ ರಾಯಭಾರಿ ಆಲ್ಫೋನ್ಸ್ ಕೂಡಾ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.