Webdunia - Bharat's app for daily news and videos

Install App

ಹೊಸ ಸಂಸತ್ ಭವನ : ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

Webdunia
ಶುಕ್ರವಾರ, 26 ಮೇ 2023 (14:46 IST)
ನವದೆಹಲಿ : ನೂತನ ಸಂಸತ್ ಭವನ ಉದ್ಘಾಟನೆಯ ಸ್ಮರಣಾರ್ಥ 75 ರೂ.ಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದಾಗಿ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
 
75 ರೂ.ಯ ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗುತ್ತದೆ ಎಂದು ತಿಳಿಸಿದೆ.

ನಾಣ್ಯದ ಇನ್ನೊಂದು ಬದಿಯಲ್ಲಿ ನೂತನ ಸಂಸತ್ತಿನ ಸಂಕೀರ್ಣದ ಚಿತ್ರವನ್ನು ಹೊಂದಿರಲಿದೆ. ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.

ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸವನ್ನು ಹೊಂದಿರಲಿದೆ. ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಬಳಸಿ ನಾಣ್ಯ ತಯಾರಿಸಲಾಗುತ್ತಿದ್ದು, ಇದು 35 ಗ್ರಾಂ ತೂಗಲಿದೆ. 

ಈ ವಿಶೇಷ ನಾಣ್ಯವನ್ನು ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥವಾಗಿ ಬಿಡುಗಡೆಗೊಳಿಸುತ್ತಿರುವುದು ಮಾತ್ರವಲ್ಲದೇ ಇದು 75 ವರ್ಷಗಳ ಸ್ವತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವದ ಸಂಕೇತವೂ ಆಗಿರಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments