Select Your Language

Notifications

webdunia
webdunia
webdunia
webdunia

ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಪಟ್ಟ : ಅಮಿತ್ ಶಾ

ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಪಟ್ಟ : ಅಮಿತ್ ಶಾ
ಚೆನ್ನೈ , ಸೋಮವಾರ, 12 ಜೂನ್ 2023 (11:02 IST)
ಚೆನ್ನೈ : ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ.
 
ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ ಶಾ ಭಾನುವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಭಾಗಿಯಾದ ಹಿರಿಯ ನಾಯಕರು ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಮಾತನಾಡಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ.

ಮುಂಬರುವ ದಿನಗಳಲ್ಲಿ ತಮಿಳುನಾಡಿನ ವ್ಯಕ್ತಿ ಈ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುವ ರೀತಿಯ ಮಾತುಗಳನ್ನು ಆಡಿದ್ದಾರೆ. ಆದರೆ ಈ ಕುರಿತು ಅಮಿತ್ ಶಾ ಹೆಚ್ಚಿನ ವಿವರ ನೀಡಲಿಲ್ಲ ಎಂದು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಶರದ್ ಪವಾರ್ಗೆ ಕೊಲೆ ಬೆದರಿಕೆ ಹಾಕಿದ್ದ ಟೆಕ್ಕಿ ಬಂಧನ