ಜಾರ್ಖಂಡ್ : ನರ್ಸಿಂಗ್ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸುವ ನೆಪದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಎನ್ ಜಿಓ ನಿರ್ದೇಶಕರನ್ನು ಬಂಧಿಸಲಾಗಿದೆ.
ಖುಂಟಿ ಜಿಲ್ಲೆಯ ತಿರ್ಲಾದಲ್ಲಿರುವ ಎನ್ ಜಿಒ ನಡೆಸುತ್ತಿರುವ ನರ್ಸಿಂಗ್ ಸಂಸ್ಥೆಯಲ್ಲಿ ನಿರ್ದೇಶಕ ವಿದ್ಯಾರ್ಥಿನಿಯರನ್ನು ಕರೆದು ಅವರ ಕೆಲಸವನ್ನು ಪರೀಕ್ಷಿಸುವ ನೆಪದಲ್ಲಿ ಅವರ ಬಟ್ಟೆಯೊಳಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಈ ಬಗ್ಗೆ ವಿದ್ಯಾರ್ಥಿನಿಯರು ಸಾಮಾಜಿಕ ಕಾರ್ಯಕರ್ತರಿಗೆ ತಿಳಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ತನಿಖೆ ನಡೆಸಿ ನಿರ್ದೇಶಕರನ್ನು ಬಂಧಿಸಲಾಗಿದೆ ಎನ್ನಲಾಗಿದೆ.