Publish Date: Wed, 15 Mar 2023 (16:56 IST)
Updated Date: Wed, 15 Mar 2023 (17:01 IST)
ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ದಾಳಿಗಳು ನಡೆದಿದೆ. ಪೊಲೀಸರು ಮತ್ತು CRPF ಸಿಬ್ಬಂದಿಗಳ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಂಗಳವಾರ ಮುಂಜಾನೆ ಹಲವು ವಸತಿ ಗೃಹಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.