Webdunia - Bharat's app for daily news and videos

Install App

ದೇಶದ 22 ಸ್ಥಳಗಳಲ್ಲಿ ಎನ್‌ಐಎ ದಿಢೀರ್‌ ದಾಳಿ: ಉಗ್ರ ಸಂಘಟನೆಗಳ ಚಟುವಟಿಕೆ ಹಿನ್ನೆಲೆಯಲ್ಲಿ ಶೋಧ

Sampriya
ಶನಿವಾರ, 5 ಅಕ್ಟೋಬರ್ 2024 (14:16 IST)
Photo Courtesy X
ನವದೆಹಲಿ: ದೇಶದ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ.  ಜೈಷ್‌ ಎ ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ಮಹಾರಾಷ್ಟ್ರ, ದೆಹಲಿ, ಅಸ್ಸಾಂ, ಉತ್ತರಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿನ 22 ಪ್ರದೇಶಗಳಲ್ಲಿ ದಾಳಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ 22 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ. ಈ ಕಾರ್ಯಾಚರಣೆ ಎರಡು ಮೂರು ದಿನ ಮುಂದುವರಿಯಬಹುದು ಎಂದು ಮೂಲಗಳು ತಿಳಿಸಿವೆ.

ಹೈಬ್ರಿಡ್‌ ಭಯೋತ್ಪಾದಕರು, ಉಗ್ರರ ಬಗ್ಗೆ ಸಹಾನುಭೂತಿ ಹೊಂದಿರುವವರು, ಅವರಿಗೆ ಆಶ್ರಯ ನೀಡಿ ಸಹಾಯ ಮಾಡುವವರು ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಅಂಗಸಂಸ್ಥೆಗಳ ಜತೆ ಸಂಬಂಧ ಹೊಂದಿರುವವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ಮಾಡಲಾಗುತ್ತಿದೆ.

ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟಗಳಾದ ಲಷ್ಕರ್ ಎ ತಯಬಾ (ಎಲ್‌ಇಟಿ), ಜೈಷ್‌–ಎ– ಮೊಹಮ್ಮದ್‌ (ಜೆಇಎಂ), ಹಿಜ್ಬುಲ್‌ ಮುಜಾಹಿದ್ದೀನ್‌ (ಎಚ್‌ಎಂ), ಅಲ್‌ ಬದ್ರ್‌, ಅಲ್‌ ಕೈದಾ ಉಗ್ರ ಸಂಘಟನೆಗಳ ಮೇಲೆ ನಿಗಾ ವಹಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments