Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ನಿರಾಣಿ

ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ನಿರಾಣಿ
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2022 (12:49 IST)
ಬೆಂಗಳೂರು : ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರ ನಿರ್ಧಾರ,
 
ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಪ್ರಶಂಸಿದ್ದಾರೆ. ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ.

ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ನಿರಾಣಿ ತಿಳಿಸಿದ್ದಾರೆ. 

ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಠೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ರಾಜಕಾರಣ ಮಾಡಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬುರ್ಖಾ ಧರಿಸಿಲ್ಲ ಎಂದು ಪತ್ನಿಯನ್ನೇ ಚಾಕುವಿನಿಂದ ಇರಿದ ಪತಿ!