Select Your Language

Notifications

webdunia
webdunia
webdunia
webdunia

ಸತತ 8ನೇ ಬಾರಿಗೆ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ನಿರ್ಮಲಾ ಸೀತಾರಾಮನ್‌

Finance Minister Nirmala Sitharaman

Sampriya

ನವದೆಹಲಿ , ಶನಿವಾರ, 1 ಫೆಬ್ರವರಿ 2025 (14:18 IST)
Photo Courtesy X
ನವದೆಹಲಿ: ಸತತ ಎಂಟನೇ ಬಾರಿಗೆ ಬಜೆಟ್‌ ಮಂಡಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹೊಸ ದಾಖಲೆ ಬರೆದಿದ್ದಾರೆ.

ಮಧುಬನಿ ಕಲೆ ಇರುವ ಸೀರೆಯನ್ನು ಧರಿಸಿ ಸಂಸತ್‌ ಭವನಕ್ಕೆ ಬಂದ ನಿರ್ಮಲಾ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಅನ್ನು ಮಂಡಿಸಿದ್ದಾರೆ.  

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ವಿವಿಧ ಅವಧಿಗಳಲ್ಲಿ 10 ಬಜೆಟ್‌ಗಳನ್ನು ಮಂಡಿಸಿರುವ ದಾಖಲೆ ಹೊಂದಿದ್ದಾರೆ. ದೇಸಾಯಿ ಅವರು 1959ರಿಂದ 1964ರವರೆಗೆ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಸತತವಾಗಿ ಒಟ್ಟು 6 ಬಜೆಟ್‌ಗಳನ್ನು ಮಂಡಿಸಿದ್ದರು. ಜತೆಗೆ, 1967 ಮತ್ತು 1969ರ ನಡುವೆ 4 ಬಜೆಟ್‌ಗಳನ್ನು ಮಂಡಿಸಿದ್ದರು.

ಮಾಜಿ ವಿತ್ತ ಸಚಿವರಾದ ಪಿ. ಚಿದಂಬರಂ ಮತ್ತು ಪ್ರಣಬ್ ಮುಖರ್ಜಿ ಅವರು ವಿವಿಧ ಅವಧಿಗಳಲ್ಲಿ ಕ್ರಮವಾಗಿ ಒಂಬತ್ತು ಮತ್ತು ಎಂಟು ಬಜೆಟ್‌ಗಳನ್ನು ಮಂಡಿಸಿದ್ದರು. ನಿರ್ಮಲಾ  ಅವರು ಸತತ ಎಂಟು ಬಜೆಟ್‌ಗಳನ್ನು ಮಂಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ವತಂತ್ರ ಭಾರತದ ಮೊದಲ ಕೇಂದ್ರ ಬಜೆಟ್ ಅನ್ನು 1947ರ ನವೆಂಬರ್ 26ರಂದು ರಾಷ್ಟ್ರದ ಮೊದಲ ಹಣಕಾಸು ಸಚಿವ ಆರ್.ಕೆ. ಷಣ್ಮುಖಂ ಚೆಟ್ಟಿ ಅವರು ಮಂಡಿಸಿದ್ದರು.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಗರಿಷ್ಠ ಸಂಖ್ಯೆಯ ಬಜೆಟ್‌ಗಳನ್ನು ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಒಟ್ಟು 10 ಬಜೆಟ್‌ಗಳನ್ನು ಮಂಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇದು ಎಲ್ಲರಿಗೂ ಖಷಿ ಕೊಡುವ ಬಜೆಟ್: ಛಲವಾದಿ ನಾರಾಯಣಸ್ವಾಮಿ