ನವದೆಹಲಿ: ಇದೇ 22ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ.
ಮಾಹಿತಿ ಪ್ರಕಾರ ಬಜೆಟ್ ಅಧಿವೇಶನಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯನ್ನು ಒಳಗೊಂಡ ಸಂಸತ್ ಅಧಿವೇಶನ ಕರೆಯುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾದ ನಂತರ ಇದು ಮೊದಲ ಬಜೆಟ್ ಇದಾಗಿದ್ದು, ನಿರೀಕ್ಷೆಗಳು ಭಾರೀ ಹೆಚ್ಚಾಗಿದೆ. ಹಣಕಾಸು ಸಚಿವರಾಗಿದ್ದ ಮೊರಾರ್ಜಿ ದೇಸಾಯಿ ಐದು ಬಾರಿ ವಾರ್ಷಿಕ ಹಾಗೂ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈಗಾಗಲೇ, ನಿರ್ಮಲಾ ಅವರು ಈ ದಾಖಲೆಯನ್ನು ಸರಿಗಟ್ಟಿದ್ದಾರೆ. 2024 25ನೇ ಸಾಲಿನ ಬಜೆಟ್ ಮಂಡಿಸಿದರೆ ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ದೇಶದ ಮೊದಲ ಹಣಕಾಸು ಸಚಿವೆ ಎಂಬ ದಾಖಲೆ ಬರೆಯಲಿದ್ದಾರೆ