ಆಸ್ಸಾಂ ರಾಜ್ಯದಲ್ಲಿ ಬಹುಮತ ಪಡೆದಿದ್ದರಿಂದ ಮಿತಿಮಿರಿದ ಸಂಭ್ರಮಾಚರಣೆ ಸರಿಯಲ್ಲ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ರಾಜಕೀಯ ಪಕ್ಷಗಳನ್ನು ಅಭಿನಂದಿಸಿದರು.
ಕಾಂಗ್ರೆಸ್ ಪಕ್ಷ ಆಸ್ಸಾ ರಾಜ್ಯದಲ್ಲಿ ಖಂಡಿತವಾಗಿಯೂ ಬಹುಮತ ದೊರೆಯಲಿದೆ ಎನ್ನುವ ಅತಿಯಾದ ಆತ್ಮವಿಶ್ವಾಸ ಸೋಲಿಗೆ ಕಾರಣವಾಯಿತು. ಆದರೆ, ಬಿಜೆಪಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಜಯ ಸಾಧಿಸಿದೆ. ಇದರಲ್ಲಿ ಯಾವ ಮೋದಿ ಮ್ಯಾಜಿಕ್ ನಡೆದಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಹಾರ್ ರಾಜ್ಯದಂತೆ ಆಸ್ಸಾಂ ರಾಜ್ಯದಲ್ಲೂ ಕೂಡಾ ಮಹಾಮೈತ್ರಿ ರಚಿಸಿಕೊಂಡಿದ್ದಲ್ಲಿ ಫಲಿತಾಂಶವೇ ಬೇರೆಯಾಗುತ್ತಿತ್ತು ಎಂದು ತಿಳಿಸಿದ್ದಾರೆ.
ಆಸ್ಸಾಂ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗುವ ಕಾಂಗ್ರೆಸ್ ಪಕ್ಷದ ನಿರ್ಧಾರ ಆ ಪಕ್ಷಕ್ಕೆ ಮುಳುವಾಯಿತು. ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷ ಇತರ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕಾಗಿತ್ತು. ಇದು ಕಾಂಗ್ರೆಸ್ ಪಕ್ಷದ ಚುನಾವಣೆ ರಣತಂತ್ರದ ವೈಫಲ್ಯವಾಗಿದೆ ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.