Select Your Language

Notifications

webdunia
webdunia
webdunia
webdunia

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

Former Chief Minister of Bihar, Nitish Kumar, Samrat Chaudhary

Sampriya

ಪಾಟ್ನಾ , ಬುಧವಾರ, 19 ನವೆಂಬರ್ 2025 (13:55 IST)
ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಜೆಡಿ(ಯು)ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, 10ನೇ ಬಾರಿ ಸಿಎಂ ಗಾದಿಗೆ ಏರಲು ವೇದಿಕೆ ಸಜ್ಜಾಗಿದೆ.

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬುಧವಾರ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಎನ್‌ಡಿಎ ಸಭೆಗೂ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸಚಿವ ಶ್ರಾವಣ್ ಕುಮಾರ್ ಅವರು ಹೇಳಿದ್ದಾರೆ. ನಿತೀಶ್ ಕುಮಾರ್ ಅವರನ್ನು ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ.

243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬಿಹಾರದ ಹೊಸ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್‌ಡಿಎ ಮಿತ್ರಪಕ್ಷಗಳು ಕಳೆದ ಕೆಲವು ದಿನಗಳಿಂದ ಚೌಕಾಶಿಯಲ್ಲಿ ತೊಡಗಿವೆ. ಸ್ಪೀಕರ್ ಹುದ್ದೆ ಬಿಜೆಪಿ ಬಳಿಯೇ ಉಳಿಯುವ ನಿರೀಕ್ಷೆಯಿದೆ. ಆದರೆ ನಿತೀಶ್ ಕುಮಾರ್ ಅವರು ಗೃಹ ಖಾತೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕರಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಆಯ್ಕೆ ಮಾಡಿದ್ದು, ಈ ಇಬ್ಬರು ನಿತೀಶ್ ಕುಮಾರ್ ನೇತೃತ್ವದ ನೂತನ ಎನ್ ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ