ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್ 10 ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಬಹುಮತ ಸಾಧಿಸಿತ್ತು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮುಖ್ಯಮಂತ್ರಿ ಹುದ್ದೆಯನ್ನು ಆರ್ ಜೆಡಿ ನಾಯಕ ನಿತೀಶ್ ಕುಮಾರ್ ಗೆ ಬಿಟ್ಟುಕೊಟ್ಟಿದೆ.
ಇಂದು ನಿತೀಶ್ ಮತ್ತೊಮ್ಮೆ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದಕ್ಕಾಗಿ ಗಾಂಧಿ ಮೈದಾನದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಸೇರಿದಂತೆ ಎನ್ ಡಿಎ ಮಿತ್ರ ಪಕ್ಷಗಳ ಪ್ರಮುಖ ನಾಯಕರು ಭಾಗಿಯಾಗುವ ನಿರೀಕ್ಷೆಯಿದೆ. ಇದರ ಜೊತೆಗೆ 3 ಲಕ್ಷಕ್ಕೂ ಅಧಿಕ ಸಾರ್ವಜನಿಕರೂ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.