Daily Horoscope
✕

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

Krishnaveni K
ಗುರುವಾರ, 20 ನವೆಂಬರ್ 2025 (10:38 IST)
Photo Credit: X
ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್ 10 ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಬಹುಮತ ಸಾಧಿಸಿತ್ತು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮುಖ್ಯಮಂತ್ರಿ ಹುದ್ದೆಯನ್ನು ಆರ್ ಜೆಡಿ ನಾಯಕ ನಿತೀಶ್ ಕುಮಾರ್ ಗೆ ಬಿಟ್ಟುಕೊಟ್ಟಿದೆ.

ಇಂದು ನಿತೀಶ್ ಮತ್ತೊಮ್ಮೆ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದಕ್ಕಾಗಿ ಗಾಂಧಿ ಮೈದಾನದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಸೇರಿದಂತೆ ಎನ್ ಡಿಎ ಮಿತ್ರ ಪಕ್ಷಗಳ ಪ್ರಮುಖ ನಾಯಕರು ಭಾಗಿಯಾಗುವ ನಿರೀಕ್ಷೆಯಿದೆ. ಇದರ ಜೊತೆಗೆ 3 ಲಕ್ಷಕ್ಕೂ ಅಧಿಕ ಸಾರ್ವಜನಿಕರೂ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಿ ರಸ್ತೆ ಬದಿಯ ಆಸ್ತಿ ಖರೀದಿ ಮಾಡುವಾಗ ಮುನ್ನೆಚ್ಚರಿಕೆ ವಹಿಸಿ: ಮುಂದೆ ಎದುರಾಗಬಹುದು ದೊಡ್ಡ ತೊಂದರೆ

ಕೆಲಸದ ಸ್ಥಳದಲ್ಲಿ ಬಾಸ್ನಿಂದ ಲೈಂಗಿಕ ಕಿರುಕುಳ: ಮಹಿಳೆಯರು ಯಾರಿಗೆ ದೂರು ನೀಡಬೇಕು, ಕಾನೂನು ಮಾರ್ಗಗಳು ಇಲ್ಲಿವೆ

ಹೌದೌದು ರಾಹುಲ್ ಗಾಂಧಿ ಆಲೂಗಡ್ಡೆಯಿಂದ ಚಿನ್ನ ಹೇಗೆ ತೆಗೀತಾರೆ ಎಂದು ನೋಡಲು ಫೋನ್ ಟ್ಯಾಪ್ ಮಾಡಿದ್ದೆವು: ಬಿಜೆಪಿ ಸಂಸದನ ವ್ಯಂಗ್ಯ Video

Karnataka Weather: ಭಾನುವಾರ ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ

ನನ್ನ ಹತ್ರ ಕಾಸಿರಲಿಲ್ಲ, ಅದಕ್ಕೆ ನನ್ನ ಟಿಕೆಟ್ ನ್ನೂ ಮೋದಿಯವರೇ ತಗೊಂಡ್ರು: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments