Webdunia - Bharat's app for daily news and videos

Install App

ವರದಕ್ಷಿಣೆ ಪ್ರಕರಣ: ನೈಜತೆ ಪರಿಶೀಲಿಸದೇ ಆರೋಪಿಗಳನ್ನು ಬಂಧಿಸುವಂತಿಲ್ಲ-ಸುಪ್ರೀಂ

Webdunia
ಶುಕ್ರವಾರ, 28 ಜುಲೈ 2017 (13:16 IST)
ನವದೆಹಲಿ: ವರದಕ್ಷಿಣೆ ಕಿರುಕುಳ ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಕರಣದ ನೈಜತೆ ಪರಿಶೀಲಿಸದೇ ಆರೋಪಿಗಳನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.
 
ವರದಕ್ಷಿಣೆ ವಿರೋಧಿ ಕಾನೂನನ್ನು ಹಲವರು ದುರ್ಬಳಕೆ ಮಾಡುತ್ತಿರುವುದನ್ನು ಗಮನಿಸಿರುವ ಸುಪ್ರೀಂ ಕೋರ್ಟ್‌,  ಡೌರಿ ಕೇಸ್‌ಗಳಲ್ಲಿ  ಆರೋಪಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಯಾವುದೇ ಬಂಧನ ನಡೆಸಬಾರದು ಎಂದು ಸೂಚಿಸಿದೆ.
 
ದಾಂಪತ್ಯದಲ್ಲಿನ ಬಿರುಕು, ಅಸಮಾಧಾನ ಇತ್ಯಾದಿಗಳ ಕಾರಣಕ್ಕೆ ವಿವಾಹಿತ ಮಹಿಳೆಯರು ಐಪಿಸಿ ಸೆ.498ಎ ಇದರ ದುರ್ಬಳಕೆ ಮಾಡಿ ಪತಿಯ ಹೆತ್ತವರು, ಅಪ್ರಾಪ್ತ ವಯಸ್ಸಿನ ಮಕ್ಕಳು, ಸಂಬಂಧಿಕರು, ಅಜ್ಜ-ಅಜ್ಜಿ ಮುಂತಾದವರ ವಿರುದ್ಧ ಸುಳ್ಳು ಕ್ರಿಮಿನಲ್‌  ಕೇಸುಗಳನ್ನು  ಹಾಕುವ ಪ್ರವೃತ್ತಿ ಹೆಚ್ಚುತ್ತಿದೆ. ಅಮಾಯಕರ ವಿರುದ್ಧ ಹಾಕಲಾಗುವ ಈ ಬಗೆಯ ಸುಳ್ಳು ಕ್ರಿಮಿನಲ್‌ ಕೇಸುಗಳು ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದರಿಂದ  ಅವುಗಳ ಸತ್ಯಾಸತ್ಯತೆಯನ್ನು ಸರಿಯಾಗಿ ಪರಾಮರ್ಶೆ ಮಾಡಿಯೇ  ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಜಸ್ಟಿಸ್‌ ಎ ಕೆ ಗೋಯಲ್‌ ಮತ್ತು ಯು ಯು ಲಲಿತ್‌ ಅವರನ್ನು ಒಳಗೊಂಡ ಪೀಠ ಸ್ಪಷ್ಟಪಡಿಸಿದೆ. ಇದೇ ವೇಳೆ ವರದಕ್ಷಿಣೆ ಹಿಂಸೆ ಪ್ರಕರಣಗಳ ದೂರನ್ನು ನಿಭಾಯಿಸಲು ನೆರವಾಗುವ ಸಲುವಾಗಿ ಎಲ್ಲ ರಾಜ್ಯಗಳು ಪ್ರತಿಯೊಂದು ಜಿಲ್ಲೆಯಲ್ಲಿ ಕುಟುಂಬ ಕಲ್ಯಾಣ ಸಮಿತಿಯೊಂದನ್ನು ರೂಪಿಸಬೇಕು ಎಂದು ಸಲಹೆ ನೀಡಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments