Publish Date: Sun, 18 Mar 2018 (09:29 IST)
Updated Date: Sun, 18 Mar 2018 (09:30 IST)
ನವದೆಹಲಿ: ರಾಹುಲ್ ಗಾಂಧಿ ಇನ್ನೂ ಯುವಕರು, ಎಲ್ಲಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವವಾದಿ ಎಂದು ಸಿಎಂ ಸಿದ್ದರಾಮಯ್ಯ ಕೊಂಡಾಡಿದ್ದಾರೆ.
ದೆಹಲಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಗುಣಗಾನ ಮಾಡಿದ್ದಾರೆ.
‘ರಾಹುಲ್ ಗಾಂಧಿ ಮುಂದಿನ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ಚುನಾವಣೆ, ಮಾನವೀಯತೆ ಮತ್ತು ಕೋಮುವಾದಿಗಳ ನಡುವೆ ನಡೆಯಲಿದೆ’ ಎಂದು ಸಿಎಂ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ