Webdunia - Bharat's app for daily news and videos

Install App

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

Webdunia
ಗುರುವಾರ, 27 ಜುಲೈ 2023 (13:38 IST)
ನವದೆಹಲಿ : ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಸಲ್ಲಿಸಲಾಗಿದೆ. ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ ಬುಧವಾರ ನೋಟಿಸ್ಗಳನ್ನು ಸಲ್ಲಿಸಿವೆ.

ಕಾಂಗ್ರೆಸ್ನ ಉಪ ನಾಯಕ ಗೌರವ್ ಗೊಗೊಯ್ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಕಚೇರಿಗೆ ನೋಟಿಸ್ ಸಲ್ಲಿಸಿದ್ದಾರೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರತ್ಯೇಕ ನೋಟಿಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಸಂಸದ ನಾಗೇಶ್ವರ್ ರಾವ್ ಅವರು ಸ್ಪೀಕರ್ಗೆ ಸಲ್ಲಿಸಿದ್ದಾರೆ.

ಮುಂದಿನ ಹಂತದಲ್ಲಿ ಲೋಕಸಭೆಯ ಸ್ಪೀಕರ್ ಕ್ರಮಬದ್ಧವಾಗಿ ನಿರ್ಣಯವನ್ನು ಸದನದಲ್ಲಿ ಓದಲಿದ್ದಾರೆ. ಬಳಿಕ ಅದನ್ನು ಮತಕ್ಕೆ ಹಾಕಲಿದ್ದಾರೆ. ವಿಪಕ್ಷಗಳ ಈ ಕಸರತ್ತಿನಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯಗಳಿಲ್ಲ. ಎನ್ಡಿಎ ಒಕ್ಕೂಟಕ್ಕೆ 332 ಸದಸ್ಯರ ಬೆಂಬಲವಿದ್ದು, ವಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ 144 ಅಸುಪಾಸಿನ ಬೆಂಬಲವಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments