Publish Date: Thu, 02 Jan 2020 (09:24 IST)
Updated Date: Thu, 02 Jan 2020 (09:26 IST)
ಬೆಂಗಳೂರು: ಪ್ರಧಾನಿ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಹಿನ್ನಲೆಯಲ್ಲಿ ರಾಜ್ಯ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಪ್ರಧಾನಿ ಭದ್ರತೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿರುವ ಪೊಲೀಸರು ಇಂದು ಬೆಂಗಳೂರಿನಲ್ಲಿ ದ್ರೋಣ್ ಮತ್ತು ಬಲೂನ್ ಗಳ ಹಾರಾಟವನ್ನು ನಿಷೇಧಿಸಿದ್ದಾರೆ.
ಬೆಂಗಳೂರು ಮಾರ್ಗವಾಗಿ ತುಮಕೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ತಯಾರಿ ಬಗ್ಗೆ ಖುದ್ದಿ ಸಿಎಂ ಮೇಲುಸ್ತುವಾರಿ ವಹಿಸಿದ್ದರು.