ಪಾಕಿಸ್ತಾನದಿಂದ ಪಾಕ್ ಆಕ್ರಮಿತ ಕಾಶ್ಮಿರವನ್ನು ವಶಪಡಿಸಿಕೊಳ್ಳಲು ಬಯಸಿದರೆ ಭಾರತವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹನ್ಸ್ರಾಜ್ ಅಹಿರ್ ಹೇಳಿದ್ದಾರೆ.
ಹಿಂದಿನ ಸರ್ಕಾರಗಳ ತಪ್ಪಿನಿಂದಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಇಸ್ಲಾಮಾಬಾದ್‌ನಲ್ಲಿದೆ ಎಂದು ತಿಳಿಸಿದ್ದಾರೆ.
ನಾನು ಪಾಕಿಸ್ತಾನ ಆಕ್ರಮಿತ-ಕಾಶ್ಮೀರ ಭಾರತದ ಒಂದು ಭಾಗವಾಗಿದೆ ಮತ್ತು ಹಿಂದಿನ ಸರ್ಕಾರಗಳ ತಪ್ಪುಗಳ ಕಾರಣದಿಂದಾಗಿ ಅದು ಪಾಕಿಸ್ತಾನದೊಂದಿಗಿದೆ. ಪಿಓಕೆ ಮರಳಿ ಪಡೆಯಲು ಪ್ರಯತ್ನಿಸಿದರೆ ಯಾರೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಏಕೆಂದರೆ ಅದು ನಮ್ಮ ಹಕ್ಕು ಎಂದರು.
ಪಾಕಿಸ್ತಾನದಿಂದ ಪಿಓಕೆ ಭೂಪ್ರದೇಶವನ್ನು ಮರಳಿ ಪಡೆಯಲು ಭಾರತವು ಪ್ರಯತ್ನಗಳನ್ನು ಮಾಡಲಿದೆ ಎಂದು ಸಚಿವರು ಹೇಳಿದರು. ಪಾಕ್ ಆಕ್ರಮಿತ ಕಾಶ್ಮಿರ ಪಾಕಿಸ್ತಾನಕ್ಕೆ ಸೇರಿದ್ದಾಗಿದೆ ಎಂದು ಜಮ್ಮು ಕಾಶ್ಮಿರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿವಾದವನ್ನು ಸೃಷ್ಟಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.