ಪಶ್ಚಿಮ ಬಂಗಾಳ: ಈಚೆಗೆ ವಿವಾದಾತ್ಮಕ ಹೇಳಿಕೆ ನೀಡಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ಅವರು ಶನಿವಾರ ಮುರ್ಷಿದಾಬಾದ್‌ನಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಕಬೀರ್ ವೇದಿಕೆಯ ಮೇಲೆ ಧರ್ಮಗುರುಗಳನ್ನು ಭೇಟಿ ಮಾಡುವ ಜೊತೆಗೆ ರಿಬ್ಬನ್ ಕತ್ತರಿಸುವ ಮೂಲಕ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡಿದರು.
ಭಾರೀ ಭದ್ರತೆಯ ಅಡಿಯಲ್ಲಿ ಶಂಕುಸ್ಥಾಪನಾ ಸಮಾರಂಭವು ರೆಜಿನಗರ ಮತ್ತು ಪಕ್ಕದ ಬೆಲ್ದಂಗ ಪ್ರದೇಶದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್, ಆರ್ಎಎಫ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.
ಶಂಕುಸ್ಥಾಪನೆ ಸಮಾರಂಭವನ್ನು ಅಡ್ಡಿಪಡಿಸಲು ಷಡ್ಯಂತ್ರಗಳನ್ನು ರೂಪಿಸಲಾಗಿದೆ ಎಂದು ಕಬೀರ್ ಹೇಳಿದ್ದಾರೆ ಆದರೆ ಲಕ್ಷಾಂತರ ಜನರು ಅಂತಹ ಪ್ರಯತ್ನಗಳನ್ನು ವಿಫಲಗೊಳಿಸುತ್ತಾರೆ ಎಂದು ತಿರುಗೇಟು ನೀಡಿದರು.
"ಬೆಳ್ದಂಗದಲ್ಲಿ ಮಸೀದಿಗೆ ಶಂಕುಸ್ಥಾಪನೆ ಮಾಡುತ್ತೇನೆ. ಯಾವುದೇ ಶಕ್ತಿ ಇದನ್ನು ತಡೆಯಲು ಸಾಧ್ಯವಿಲ್ಲ. ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ನಾವು ಹೋಗುತ್ತೇವೆ ಎಂದು ಕಬೀರ್ ಅವರು ಸ್ಥಳಕ್ಕೆ ಭೇಟಿ ನೀಡುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.
ಹಿಂಸಾಚಾರವನ್ನು ಪ್ರಚೋದಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಪಿತೂರಿಗಳು ನಡೆಯುತ್ತಿವೆ. ಸಂವಿಧಾನದ ಪ್ರಕಾರ 2000 ಕ್ಕೂ ಹೆಚ್ಚು ಸ್ವಯಂಸೇವಕರು ಕರ್ತವ್ಯದಲ್ಲಿದ್ದಾರೆ.