ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

Sampriya
ಶನಿವಾರ, 6 ಡಿಸೆಂಬರ್ 2025 (16:53 IST)
ಪಶ್ಚಿಮ ಬಂಗಾಳ: ಈಚೆಗೆ ವಿವಾದಾತ್ಮಕ ಹೇಳಿಕೆ ನೀಡಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ಅವರು ಶನಿವಾರ ಮುರ್ಷಿದಾಬಾದ್‌ನಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಕಬೀರ್ ವೇದಿಕೆಯ ಮೇಲೆ ಧರ್ಮಗುರುಗಳನ್ನು ಭೇಟಿ ಮಾಡುವ ಜೊತೆಗೆ ರಿಬ್ಬನ್ ಕತ್ತರಿಸುವ ಮೂಲಕ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡಿದರು.

ಭಾರೀ ಭದ್ರತೆಯ ಅಡಿಯಲ್ಲಿ ಶಂಕುಸ್ಥಾಪನಾ ಸಮಾರಂಭವು ರೆಜಿನಗರ ಮತ್ತು ಪಕ್ಕದ ಬೆಲ್ದಂಗ ಪ್ರದೇಶದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್, ಆರ್ಎಎಫ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

 ಶಂಕುಸ್ಥಾಪನೆ ಸಮಾರಂಭವನ್ನು ಅಡ್ಡಿಪಡಿಸಲು ಷಡ್ಯಂತ್ರಗಳನ್ನು ರೂಪಿಸಲಾಗಿದೆ ಎಂದು ಕಬೀರ್ ಹೇಳಿದ್ದಾರೆ ಆದರೆ ಲಕ್ಷಾಂತರ ಜನರು ಅಂತಹ ಪ್ರಯತ್ನಗಳನ್ನು ವಿಫಲಗೊಳಿಸುತ್ತಾರೆ ಎಂದು ತಿರುಗೇಟು ನೀಡಿದರು. 

"ಬೆಳ್ದಂಗದಲ್ಲಿ ಮಸೀದಿಗೆ ಶಂಕುಸ್ಥಾಪನೆ ಮಾಡುತ್ತೇನೆ. ಯಾವುದೇ ಶಕ್ತಿ ಇದನ್ನು ತಡೆಯಲು ಸಾಧ್ಯವಿಲ್ಲ. ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ನಾವು ಹೋಗುತ್ತೇವೆ  ಎಂದು ಕಬೀರ್ ಅವರು ಸ್ಥಳಕ್ಕೆ ಭೇಟಿ ನೀಡುವ ಮೊದಲು ಸುದ್ದಿಗಾರರಿಗೆ ತಿಳಿಸಿದರು. 

ಹಿಂಸಾಚಾರವನ್ನು ಪ್ರಚೋದಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಪಿತೂರಿಗಳು ನಡೆಯುತ್ತಿವೆ. ಸಂವಿಧಾನದ ಪ್ರಕಾರ 2000 ಕ್ಕೂ ಹೆಚ್ಚು ಸ್ವಯಂಸೇವಕರು ಕರ್ತವ್ಯದಲ್ಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments