ನವದೆಹಲಿ: ಅಭದ್ರತೆ ಕಾಡುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ, ದೇಶಕ್ಕೆ ಭೇಟಿ ನೀಡುವ ಗಣ್ಯರನ್ನು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ಸೂಚನೆ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಗೂ ಮುನ್ನ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಿದೇಶಾಂಗ ಗಣ್ಯರನ್ನು ಭೇಟಿಯಾಗದಂತೆ ಕೇಂದ್ರವು ಸೂಚಿಸುತ್ತಿದೆ ಎಂದು ಆರೋಪ ಮಾಡಿದರು.
ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಅವರು, ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಅವರ ಆಡಳಿತದಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದು ಸಂಪ್ರದಾಯವಾಗಿತ್ತಿದೆ.
ಆದರೆ ಇತ್ತೀಚಿನ ದಿನಗಳಲ್ಲಿ ವಿದೇಶಿ ಗಣ್ಯರು ಭಾರತಕ್ಕೆ ಭೇಟಿ ನೀಡಿದಾಗ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗದಂತೆ ಸೂಚಿಸುತ್ತಿದೆ. ಇದು ಅವರ ನೀತಿಯಾಗಿದೆ ಮತ್ತು ಅವರು ಇದನ್ನು ಎಲ್ಲಾ ಸಮಯದಲ್ಲೂ ಮಾಡುತ್ತಾರೆ ಎಂದು ಅವರು ಹೇಳಿದರು.