Webdunia - Bharat's app for daily news and videos

Install App

ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಚಪ್ಪಲಿ ಹಾಕಲ್ಲ: ಅಣ್ಣಾಮಲೈ ಪ್ರತಿಜ್ಞೆ

Sampriya
ಗುರುವಾರ, 26 ಡಿಸೆಂಬರ್ 2024 (19:18 IST)
ಕೊಯಮತ್ತೂರು: ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಗುರುವಾರ ಪ್ರತಿಜ್ಞೆ ಮಾಡಿದ್ದಾರೆ.

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯನ್ನು ವಿರೋಧಿಸಿ  ಶುಕ್ರವಾರ ತಮ್ಮ ಮನೆಯ ಮುಂದೆ ಆರು ಬಾರಿ ಚಾಟಿ ಬೀಸುವುದರ ಮೂಲಕ ಪ್ರತಿಭಟಿಸುವುದಾಗಿ ಹೇಳಿದರು.

ಅದಲ್ಲದೆ ಪ್ರಕರಣದಲ್ಲಿ ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಅಣ್ಣಾಮಲೈ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.

ಎಫ್‌ಐಆರ್ ಸಾರ್ವಜನಿಕ ಡೊಮೇನ್ ಅನ್ನು ಹೇಗೆ ಪ್ರವೇಶಿಸಿತು? ಎಫ್‌ಐಆರ್ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದೀರಿ.  ಎಫ್‌ಐಆರ್‌ ಅನ್ನು ಸೋರಿಕೆ ಮಾಡಿದ ಪೊಲೀಸರು ಮತ್ತು ಡಿಎಂಕೆಗೆ ನಾಚಿಕೆಯಾಗಬೇಕು ಎಂದು ಕಾನೂನು ಸಚಿವ ಎಸ್ ರೇಗುಪತಿ ವಿರುದ್ಧ ವಾಗ್ದಾಳಿ ನಡೆಸಿದರು.

ನಿರ್ಭಯಾ ನಿಧಿ ಎಲ್ಲಿಗೆ ಹೋಯಿತು? ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾ ಏಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ