Select Your Language

Notifications

webdunia
webdunia
webdunia
webdunia

ದೇಶದ್ರೋಹ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್

ದೇಶದ್ರೋಹ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್
ನವದೆಹಲಿ , ಬುಧವಾರ, 11 ಮೇ 2022 (15:51 IST)
ನವದೆಹಲಿ : ಕೇಂದ್ರ ಸರ್ಕಾರದ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹದ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣ ದಾಖಲಾಗಿ ಜೈಲಿನಲ್ಲಿರುವವರು ಜಾಮೀನು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. 

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೀಠ ಜುಲೈಗೆ ಮುಂದೂಡಿಕೆ ಮಾಡಿದೆ.

ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ..


Share this Story:

Follow Webdunia kannada

ಮುಂದಿನ ಸುದ್ದಿ

ಧ್ವನಿವರ್ಧಕ ಬಳಸುವ ಬಗ್ಗೆ ಗೊಂದಲ ಇಲ್ಲ : ಕಮಲ್ ಪಂತ್