ಇದೀಗ, ರಾಹುಲ್, ಸಿದ್ದರಾಮಯ್ಯರಿಗೆ ಹಿಂದುತ್ವ ನೆನಪಾಗಿದೆ: ಸಿಎಂ ಯೋಗಿ ಲೇವಡಿ

ಭಾನುವಾರ, 7 ಜನವರಿ 2018 (13:20 IST)
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯರಿಗೆ ಇದೀಗ ಹಿಂದುತ್ವ ನೆನಪಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲೇವಡಿ ಮಾಡಿದ್ದಾರೆ.
ಬಿಜೆಪಿ ಪರಿವರ್ತನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಗೋಹತ್ಯೆ ನಿಷೇಧವನ್ನು ಜಾರಿಗೊಳಿಸಿತ್ತು. ಆದರೆ, ಹಿಂದು ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಯಾಕೆ ಗೋಹತ್ಯೆ ನಿಷೇಧಿಸಿಲ್ಲ ಎಂದು ತಿರುಗೇಟು ನೀಡಿದರು.
 
ಹಿಂದುಗಳು ಗೋಹತ್ಯೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೂಡಲೇ ರಾಜ್ಯ ಸರಕಾರ ಗೋಹತ್ಯೆ ನಿಷೇಧಿಸಲಿ ಎಂದು ಒತ್ತಾಯಿಸಿದರು.
 
ಒಂದು ಕಾಲದಲ್ಲಿ ಸಿಲಿಕಾನ್ ವ್ಯಾಲಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು, ಕಾಂಗ್ರೆಸ್ ಸರಕಾರ ಅವಧಿಯಲ್ಲಿ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ಅಂದಿನ ಪ್ರಧಾನಿ ವಾಜಪೇಯಿ ಬೆಂಗಳೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೊಡುಗೆಯಾಗಿ ನೀಡಿದರು. ಪ್ರಧಾನಿ ಮೋದಿ ಸ್ಮಾರ್ಟ್ ಸಿಟಿ ನೀಡಿದ್ದಾರೆ ಎಂದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಜಮ್ಮುವಿನ ಯುವಕರನ್ನು ಭಾರತದ ವಿರುದ್ಧ ಎತ್ತಿಕಟ್ಟುತ್ತಿರುವ ಪಾಕಿಸ್ತಾನ– ರಾಜನಾಥ್ ಸಿಂಗ್