Select Your Language

Notifications

webdunia
webdunia
webdunia
webdunia

ಎನ್‌ಡಿಎ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳಲ್ಲಿ ಇಳಿಕೆ: ರಿಜಿಜು

ಎನ್‌ಡಿಎ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳಲ್ಲಿ ಇಳಿಕೆ: ರಿಜಿಜು
ನವದೆಹಲಿ , ಮಂಗಳವಾರ, 1 ಡಿಸೆಂಬರ್ 2015 (15:02 IST)
ಎನ್‌ಡಿಎ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳು ಗಣನೀಯವಾಗಿ ಇಳಿಮುಖವಾಗಿವೆ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು ಲೋಕಸಭೆಗೆ ತಿಳಿಸಿದ್ದಾರೆ.
 
ದೇಶದ ವಿವಿಧ ದೇಶಗಳಲ್ಲಿ ನಡೆಯುತ್ತಿರುವ ಕೋಮುವಾದಿ ಘಟನೆಗಳು ಬಗ್ಗೆ ಪ್ರತಿಕ್ರಿಯೆ ನೀಡಿದ ರಿಜಿಜು, ಕಳೆದ 2013ರಿಂದ ಪ್ರಸಕ್ತ ವರ್ಷದ ಅಕ್ಟೋಬರ್ ತಿಂಗಳವರೆಗೆ ಕೋಮುಘಟನೆಗಳಲ್ಲಿ ಇಳಿಮುಖವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರಸಕ್ತ ವರ್ಷದ ಅವಧಿಯಲ್ಲಿ ನಾಲ್ಕು ಕೋಮುಘಟನೆಗಳು ನಡೆದಿವೆ. ಆದರೆ, ವಾಸ್ತವಾಂಶವೆಂದರೆ, ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಂತರ ಸಾಮರಸ್ಯದ ವಾತಾವರಣ ಕಂಡುಬಂದಿದೆ ಎಂದರು.
 
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಮತ್ತೆ ಎನ್‌ಡಿಎ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದವು. ವಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ ರಿಜಿಜು, ಕಳೆದ 2014 ಮತ್ತು 2015ರಲ್ಲಿ ಕೋಮುಘಟನೆಗಳು ಹೆಚ್ಚಾಗಿದ್ದವು. ಆದರೆ, 2013ರ ನಂತರ ಭಾರಿ ಇಳಿಮುಖವಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು ತಿಳಿಸಿದ್ದಾರೆ. 
 

Share this Story:

Follow Webdunia kannada