Webdunia - Bharat's app for daily news and videos

Install App

ರೈಲ್ವೆ ನಿಲ್ದಾಣದ ಟಿವಿಯಲ್ಲಿ ಪ್ರಸಾರವಾಯ್ತು ಅಶ್ಲೀಲ ವೀಡಿಯೋ

Webdunia
ಸೋಮವಾರ, 20 ಮಾರ್ಚ್ 2023 (12:15 IST)
ಪಾಟ್ನಾ : ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಟಿವಿ ಪರದೆಯಲ್ಲಿ ಅಶ್ಲೀಲ ವೀಡಿಯೋ ಪ್ರಸಾರವಾಗಿ ಸ್ಥಳದಲ್ಲಿ ನೆರೆದಿದ್ದ ನೂರಾರು ಪ್ರಯಾಣಿಕರು ಮುಜುಗರಕ್ಕೀಡಾದ ಪ್ರಸಂಗ ಬಿಹಾರದ ಪಾಟ್ನಾ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ 9:30ರ ವೇಳೆಗೆ ನಿಲ್ದಾಣದಲ್ಲಿ ಸ್ಥಾಪಿಸಲಾಗಿದ್ದ ಟಿವಿ ಪರದೆ ಮೇಲೆ ಸುಮಾರು 3 ನಿಮಿಷಗಳ ಕಾಲ ಅಶ್ಲೀಲ ವೀಡಿಯೋ ಪ್ರದರ್ಶನವಾಗಿದೆ. ನಿಲ್ದಾಣದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರಿದ್ದು, ಈ ವೇಳೆ ಜನರು ಮುಜುಗರಕ್ಕೀಡಾಗಿದ್ದಾರೆ.

ಘಟನೆ ನಡೆದ ತಕ್ಷಣವೇ ಪ್ರಯಾಣಿಕರು ಈ ಬಗ್ಗೆ ಸರ್ಕಾರಿ ರೈಲ್ವೆ ಪೊಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಜಾಹೀರಾತು ಪ್ರದರ್ಶನ ಮಾಡುವ ಸಂಸ್ಥೆ ದತ್ತಾ ಕಮ್ಯುನಿಕೇಷನ್ ಬಳಿ ಈ ಬಗ್ಗೆ ವಿಚಾರಿಸಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರ ಮುಂದೆ ಈ ರೀತಿ ಅಶ್ಲೀಲ ವೀಡಿಯೋ ಪ್ರದರ್ಶನ ಮಾಡಿದ್ದಕ್ಕಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಬಳಿಕ ರೈಲ್ವೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಜಾಹೀರಾತು ಪ್ರಸಾರ ಮಾಡಲು ನೀಡಲಾಗಿದ್ದ ಗುತ್ತಿಗೆಯನ್ನು ರದ್ದುಗೊಳಿಸಿದ್ದಾರೆ ಮತ್ತು ದತ್ತಾ ಕಮ್ಯುನಿಕೇಷನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments