Select Your Language

Notifications

webdunia
webdunia
webdunia
webdunia

ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: 1441 ಸ್ಕೂಟರ್ ವಾಪಸ್ ಪಡೆದ ಓಲಾ!

ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: 1441 ಸ್ಕೂಟರ್ ವಾಪಸ್ ಪಡೆದ ಓಲಾ!
bengaluru , ಭಾನುವಾರ, 24 ಏಪ್ರಿಲ್ 2022 (16:45 IST)

ದೇಶದ ಹಲವೆಡೆ ಎಲೆಕ್ಟ್ರಿಕ್ ಸ್ಕೂಟರ್ ಗಳ ಸ್ಫೋಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಓಲಾ ಕಂಪನಿ 1400 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ವಾಪಸ್ ಪಡೆದಿದೆ.

ಮಾರ್ಚ್ 26ರಂದು ಪುಣೆಯಲ್ಲಿ ಸಂಭವಿಸಿದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಜನರ ಹಿತದೃಷ್ಟಿಯಿಂದ ಈಗಾಗಲೇ ಮಾರುಕಟ್ಟೆ ಪ್ರವೇಶಿಸಿರುವ 1441 ಸ್ಕೂಟರ್ ಗಳನ್ನು ವಾಪಸ್ ಪಡೆಯಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್ ಗಳು ಸ್ಫೋಟಗೊಳ್ಳಲು ಕಾರಣವೇನು ಎಂದು ಇಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಟರಿ, ಚಾರ್ಜರ್, ವಯರಿಂಗ್ ಸೇರಿದಂತೆ ಪ್ರತಿಯೊಂದನ್ನು ಅಭ್ಯಾಸಿಸಿ ಸೂಕ್ತ ಪರಿಹಾರ ಕಂಡುಕೊಂಡ ನಂತರ ಸ್ಕೂಟರ್ ಗಳನ್ನು ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಓಲಾ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ ದಾಳಿಗೆ 3 ತಿಂಗಳ ಹಸುಗೂಸು ಸಾವು: ಉಕ್ರೇನ್ ಅಧ್ಯಕ್ಷ ಕಿಡಿ