ಆ.1ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Webdunia
ಸೋಮವಾರ, 31 ಜುಲೈ 2023 (12:34 IST)
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆ.1) ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ)  ಪ್ರದಾನ ಮಾಡಲಿದೆ.
 
ಜತೆಗೆ ಅವರು ಪುಣೆಯಯಲ್ಲಿರುವ ದಗ್ದುಶೇತ್ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಛೇರಿ ತಿಳಿಸಿದೆ. ಬೆಳಿಗ್ಗೆ 11 ಗಂಟೆಗೆ ದಗ್ದುಶೇತ್ ದೇವಾಲಯದಲ್ಲಿ ಪೂಜೆ ಸಲ್ಲಿಸಿ, 11.45ಕ್ಕೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ನಂತರ 12.45ಕ್ಕೆ ನೂತನ ಮೆಟ್ರೋ ರೈಲು ಸಂಚಾರಕ್ಕೆ ಚಾಲನೆ ಮತ್ತು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದೆ.

ಪುಣೆ ಮೆಟ್ರೋ ಮೊದಲ ಹಂತದ ಕಾರಿಡಾರ್ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ರೈಲು ಸಂಚಾರಕ್ಕೆ ಸಿದ್ಧಗೊಂಡಿದ್ದು, ನಾಳೆ ಪ್ರಧಾನಿ ಮೋದಿ ಮೆಟ್ರೋಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಮೆಟ್ರೋ ಫುಗೆವಾಡಿ ನಿಲ್ದಾಣದಿಂದ ಸಿವಿಲ್ ಕೋರ್ಟ್ ನಿಲ್ದಾಣದವರೆಗೆ ಹಾಗೂ ಗಾರ್ವೇರ್ ಕಾಲೇಜು ನಿಲ್ದಾಣದಿಂದ ರೂಬಿ ಹಾಲ್ ಕ್ಲಿನಿಕ್ ನಿಲ್ದಾಣದವರೆಗೆ ಸಂಚಾರಿಸಲಿದೆ ಎಂದು ಪ್ರಧಾನ ಮಂತ್ರಿಗಳ ಕಛೇರಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments