Publish Date: Fri, 10 May 2019 (09:04 IST)
Updated Date: Fri, 10 May 2019 (09:05 IST)
ಉತ್ತರ ಪ್ರದೇಶ: ಒಂದೂವರೆ ವರ್ಷದ ಮಗುವಿನ ಮೇಲೆ ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪೋಹಿಯಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಾಯಿಯೊಂದಿಗೆ ಮದುವೆಗೆ ಬಂದಿದ್ದ ಮಗುವನ್ನು ಸಂಬಂಧಿಕನೊಬ್ಬ ಯಾರಿಗೂ ತಿಳಿಯದಂತೆ ಸಮಾರಂಭ ನಡೆಯುತ್ತಿದ್ದ ಸ್ಥಳದಿಂದ ಎತ್ತುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮಗು ಕಾಣದಿದ್ದಾಗ ಹುಡುಕಾಡಿದ ತಾಯಿಗೆ ಮಗು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಸುಮಾರು 400 ಮೀ. ದೂರದಲ್ಲಿದ್ದ ಪೊದೆಯೊಂದರ ನಡುವೆ ಜ್ಞಾನ ತಪ್ಪಿ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು.
ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿಯನ್ನು ಸೆರೆಹಿಡಿಯಲು ಪೊಲೀಸರು ಬಲೆ ಬಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.