Webdunia - Bharat's app for daily news and videos

Install App

1 ಕೋಟಿ ಲಂಚ ಆರೋಪ: ಸದನದಲ್ಲಿ ನಾಯಕರ ಅಭಿಪ್ರಾಯ ?

Webdunia
ಬುಧವಾರ, 1 ಜುಲೈ 2015 (17:31 IST)
ಲೋಕಾಯುಕ್ತ ಇಲಾಖೆಯಲ್ಲಿಯೇ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳೂ ಭಾಗಿಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿ ಕೋಟಿ ಹಣ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.  
 
ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ನೇತೃತ್ವದಲ್ಲಿ ಸಭೆ ನಡೆದಿದೆ. ಆ ಬಗ್ಗೆ ಸರ್ಕಾರದ ಗಮನಕ್ಕೆ ಬರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಪ್ರಕರಣದಲ್ಲಿ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಆ ಎಲ್ಲಾ ಅಧಿಕಾರಿಗಳ ಹೆಸರೂ ನನ್ನ ಬಳಿ ಇದೆ ಎಂದರು. 
 
ಇದೇ ವೇಳೆ, ಕಂದಾಯ ಸಚಿವದ ಆಪ್ತ ಕಾರ್ಯದರ್ಶಿ ನಾಗರಾಜ್, ಇತರೆ ಅಧಿಕಾರಿಗಳಾದ ಭಾಸ್ಕರ್, ರಾಜಶೇಖರ್ ಹಾಗೂ ರಿಯಾಜ್ ಎಂದೂ ಕೂಡ ಮಾಹಿತಿ ನೀಡಿದರು. 
 
ಬಳಿಕ, ಸರ್ಕಾರ ಪ್ರಕರಣದ ತನಿಖೆಗಾಗಿ ಎಸ್ಐಟಿಯನ್ನು ರಚಿಸಿದೆ. ಆದರೆ ಎಸ್ಐಟಿ ತಂಡದಲ್ಲಿಯೇ ಕೆಲ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿರಬಹುದು. ಎಸ್ಐಟಿಯಿಂದ ಸತ್ಯಾಂಶ ಹೊರ ಬರುವುದಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸುವುದೇ ಸೂಕ್ತ ಎಂಬ ಅಭಿಪ್ರಾಯವನ್ನು ಹೊರ ಹಾಕಿದರು. 
 
ಬಳಿಕ ಮಾತನಾಡಿದ ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ, ಸರ್ಕಾರ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರ ನೇತೃತ್ವದಲ್ಲಿ ಎಸ್ಐಟಿ ರಚಿಸಿದೆ. ಆದರೆ ಅವರು ಪ್ರಸ್ತುತ 3 ತಿಂಗಳುಗಳ ಕಾಲ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ಆದ್ದರಿಂದ ಅವರ ಅನುಪಸ್ಥಿತಿಯಲ್ಲಿ ತನಿಖೆ ಹೇಗೆ ಸಾಧ್ಯ ಎಂದು ಸ್ರಕಾರವನ್ನು ಪ್ರಶ್ನಿಸಿದರು. 
 
ಇನ್ನು ಈ ಬಗ್ಗೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಪ್ರತಿಕ್ರಿಯಿಸಿದ್ದು, ತಮ್ಮ ತಪ್ಪನ್ನು ಅರಿತು ರಾಜ್ಯದ ಮುಖ್ಯ ಲೋಕಾಯುಕ್ತರು ತಾವೇ ರಾಜೀನಾಮೆ ನೀಡಬೇಕಿತ್ತು. ಆದರೆ ನೀಡಿಲ್ಲ. ಏನೇ ಆದರೂ ಲೋಕಾಯುಕ್ತ ಇಲಾಖೆಯಲ್ಲಿಯೇ ಈ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜನತೆಗೆ ಪ್ರಸ್ತುತ ಲೋಕಾಯುಕ್ತ ಸಂಸ್ಥೆ ಬಗ್ಗೆ ಅಪನಂಬಿಕೆ ಮೂಡುತ್ತಿದೆ. ಅಲ್ಲದೆ ಆರೋಪಿಗಳು ಯಾರೇ ಆಗಿದ್ದರೂ ಕೂಡ ಅವರಿಗೆ ಶಿಕ್ಷೆಯಾಗಬೇಕು. ಈ ಹಿನ್ನೆಲೆಯಲ್ಲಿ ಸಿಬಿಐಗೆ ವಹಿಸುವುದೇ ಸೂಕ್ತ ಎಂದು ಸರ್ಕಾರವನ್ನು ಒತ್ತಾಯಿಸಿದರು. 
 
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಲೋಕಾಯುಕ್ತರನ್ನು ಕಡೆಗಣಿಸಿ ಪ್ರಕಱಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ. ಆದ್ದರಿಂದ ಕಾನೂನು ಸಲಹೆ ಪಡೆದು ಮುನ್ನಡೆಯುತ್ತೇನೆ ಎಂದರು. ಆಗ ಶೆಟ್ಟರ್ ಅಧಿಕಾರ ಬಳಸಿ ಕಾನೂನಿಗೆ ತಿದ್ದುಪಡಿ ತನ್ನಿ. ಬಳಿಕ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿ ಎಂದು ಸಲಹೆ ನೀಡಿದರು.   
 
ಏನಿದು ಪ್ರಕರಣ?: 
ಲೋಕಾಯುಕ್ತ ಇಲಾಖೆಯಲ್ಲಿನ ಅಧಿಕಾರಿಗಳೇ ಭ್ರಷ್ಟರನ್ನು ರಕ್ಷಿಸಲು 1 ಕೋಟಿ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪ ಇದಾಗಿದ್ದು, ಎಸ್‌ಪಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಆದರೆ ಲೋಕಾಯುಕ್ತ ಇಲಾಖೆಯಲ್ಲಿ ಪ್ರಕರಣ ನಡೆದಿದ್ದು, ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ತನಿಖೆ ನಡೆಸುವುದು ಸರಿಯಲ್ಲ ಎಂದು ನೆಪ ಹೇಳಿದ್ದ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ. ವೈ.ಭಾಸ್ಕರ್ ರಾವ್ ಅವರು ತಮ್ಮ ಅಧಿಕಾರ ಬಳಸಿ ಲೋಕಾಯುಕ್ತ ತನಿಖೆಗೆ ತಡೆ ನೀಡಿ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದರು.
 
ಆದರೆ ಈ ಸಂಬಂಧ ಪ್ರತಿಕ್ರಿಯಿಸಿದ್ದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಪ್ರಕರಣವನ್ನು ವರ್ಗಾಯಿಸುವ ಬಗ್ಗೆ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ. ಅಲ್ಲದೆ ಸಿಸಿಬಿಗೆ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ ಎಂದಿದ್ದರು. ಜೊತೆಗೆ ಸೋನಿಯಾ ನಾರಂಗ್ ಅವರಿಗೆ ತಮ್ಮ ತನಿಖೆಯನ್ನು ಮುಂದುವರಿಸುವಂತೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ನಾರಂಗ್ ತನಿಖೆಯನ್ನು ಮುಂದುವರಿಸಿದ್ದರು. ಆದರೆ ಹೈಕೋರ್ಟ್‌ ಇಂದು ತನಿಖೆ ನಿಲ್ಲಿಸಲು ತಡೆಯಾಜ್ಞೆ ಹೊರಡಿಸಿದೆ.
 
ಪ್ರಕರಣದ ಸಿಸಿಬಿ ತನಿಖೆ ಸಂಬಂಧ ಕೆಲ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯ ಲೋಕಾಯುಕ್ತರು ಸರ್ಕಾರಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್ಐಟಿಯನ್ನು ರಚಿಸಿದ್ದರು. ಪ್ರಸ್ತುತ ಕಾರಾಗೃಹ ಎಡಿಜಿಪಿ ಕಮಲ್ ಪಂತ್ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಯುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments