Webdunia - Bharat's app for daily news and videos

Install App

ಮುಂದುವರೆದ ಉಗ್ರರ ಅಟ್ಟಹಾಸ; ಉಗ್ರನ ಹತ್ಯೆ, ಮೂವರು ಹುತಾತ್ಮ, 6 ಜನರಿಗೆ ಗಾಯ

Webdunia
ಮಂಗಳವಾರ, 14 ಫೆಬ್ರವರಿ 2017 (12:32 IST)
ಗಡಿಯಲ್ಲಿ ಉಗ್ರರ ತಂಟೆ ಮುಂದುವರೆದಿದ್ದು ಮಂಗಳವಾರ ನಸುಕಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಜತೆಗೆ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ಬಂಡಿಪೋರ್  ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 5.30 ರ ಸುಮಾರಿಗೆ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಇತರ 6 ಜನ ಭದ್ರತಾ ಸಿಬ್ಬಂದಿ ಮತ್ತು ನಾಗರಿಕರು ಸಹ ಗಾಯಗೊಂಡಿದ್ದು ಅವರನ್ನು ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಗಿದೆ. 
 
ಇಲ್ಲಿನ ಮೊಹಲದಲ್ಲಿ ಉಗ್ರರು ಅವಿತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಖಚಿತ ಸುಳಿವು ಲಭಿಸಿದ ತಕ್ಷಣ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿದ್ದಾಗ ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 9 ಸೈನಿಕರು ಗಾಯಗೊಂಡಿದ್ದು, ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಸೈನ್ಯದ ಮೂಲಗಳು ತಿಳಿಸಿವೆ.
 
ಎಷ್ಟು ಜನ ಉಗ್ರರಿದ್ದಾರೆ ಎಂಬ ಬಗ್ಗೆ ಇನ್ನು ಖಚಿತ ಮಾಹಿತಿ ದೊರತಿಲ್ಲ. ಕಾರ್ಯಾಚರಣೆ ಈಗಲೂ ಮುಂದುವರೆದಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments