Publish Date: Sat, 22 Oct 2016 (18:15 IST)
Updated Date: Sat, 22 Oct 2016 (18:17 IST)
ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಸುವ ಮುನ್ನವೇ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿರುವುದು ಬಿಜೆಪಿ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಜೆಪಿ ಮತ್ತು ಸಿಪಿಎ(ಎಂ) ಕಾರ್ಯಕರ್ತರ ಮಧ್ಯೆ ಹೆಚ್ಚುತ್ತಿರುವ ದ್ವೇಷದ ವಾತಾವರಣ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ.
ಕಳೆದ ಒಂದು ತಿಂಗಳಲ್ಲಿ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತನ ಹತ್ಯೆಯಾಗಿದ್ದರೂ ಇಲ್ಲಿಯವರೆಗೆ ಆರೋಪಿಗಳ ಪತ್ತೆಯಾಗಿಲ್ಲ.ಇಂತಹ ಪರಿಸ್ಥಿತಿಯ ಮಧ್ಯೆ ಮತ್ತೆ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಆರೆಸ್ಸೆಸ್ ಪರೋಕ್ಷವಾಗಿ ಸಂಚು ರೂಪಿಸಿದೆ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವದಲ್ಲಿರದಿದ್ದರೂ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಳೆಸಬೇಕು ಎನ್ನುವ ಹುನ್ನಾರ ಆರೆಸ್ಸೆಸ್ ನಡೆಸಿದೆ ಎಂದು ಸಿಪಿಎ(ಎಂ) ಮುಖಂಡರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ