Webdunia - Bharat's app for daily news and videos

Install App

ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅಸ್ತು

Sampriya
ಬುಧವಾರ, 18 ಸೆಪ್ಟಂಬರ್ 2024 (19:23 IST)
Photo Courtesy X
ನವದೆಹಲಿ:  ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಗ್ರೀನ್‌ ಸಿಗ್ನಲ್ ನೀಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಮಸೂದೆಯನ್ನು ತರಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದರು. ಪದೇ ಪದೇ ಚುನಾವಣೆ ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಮೋದಿ ಭಾಷಣದಲ್ಲಿ ಹೇಳಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments