Select Your Language

Notifications

webdunia
webdunia
webdunia
webdunia

ಒಬ್ಬ ವ್ಯಕ್ತಿಯ ಅಂಗಾಂಗ ದಾನದಿಂದ 8 ಮಂದಿಗೆ ಜೀವದಾನ ಸಾಧ್ಯ : ನರೇಂದ್ರ ಮೋದಿ

ಒಬ್ಬ ವ್ಯಕ್ತಿಯ ಅಂಗಾಂಗ ದಾನದಿಂದ 8 ಮಂದಿಗೆ ಜೀವದಾನ ಸಾಧ್ಯ : ನರೇಂದ್ರ ಮೋದಿ
ನವದೆಹಲಿ , ಸೋಮವಾರ, 27 ಮಾರ್ಚ್ 2023 (10:03 IST)
ನವದೆಹಲಿ : ಒಬ್ಬ ವ್ಯಕ್ತಿಯ ಅಂಗಾಂಗ ದಾನದಿಂದ 8ರಿಂದ 9 ಮಂದಿಗೆ ಜೀವದಾನ ಮಾಡಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನತೆಗೆ ಅಂಗಾಂಗ ದಾನದ ಮಹತ್ವವನ್ನು ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ.
 
ಮನ್ ಕಿ ಬಾತ್ ಮಾಸಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತರರಿಗೆ ಹೊಸ ಜೀವನ ನೀಡುವ ನಿಟ್ಟಿನಲ್ಲಿ ಜನರನ್ನು ಉತ್ತೇಜಿಸಲು ಸರ್ಕಾರವು ಹಲವಾರು ನಿಯಮಗಳನ್ನು ಸಡಿಲಿಸಿದೆ ಎಂದು ತಿಳಿಸಿದ್ದಾರೆ.  ಇಂದು ನಾವು ಆಜಾದಿ ಕಾ ಅಮೃತಕಲ್ ಅನ್ನು ಆಚರಿಸುತ್ತಿದ್ದೇವೆ. ಜೊತೆಗೆ ಹೊಸ ನಿರ್ಣಯಗಳೊಂದಿಗೆ ಮುಂದುವರಿಯುತ್ತಿದ್ದೇವೆ.

ಈಗ ‘ಮನ್ ಕಿ ಬಾತ್’ 99ನೇ ಸಂಚಿಕೆ ಮುಗಿಸಿದ್ದು, 100ನೇ ಸಂಚಿಕೆಗೆ ನಿಮ್ಮೆಲ್ಲರ ಸಲಹೆಗಳನ್ನು ಪಡೆಯಲು ನಾನು ತುಂಬಾ ಉತ್ಸುಕನಾಗಿದ್ದೇನೆ. ನಿಮ್ಮ ಸಲಹೆಗಳು 100 ನೇ ಸಂಚಿಕೆಯನ್ನು ಇನ್ನಷ್ಟು ಸ್ಮರಣೀಯವಾಗಿಸುತ್ತದೆ ಎಂದು ಹೇಳಿದ್ದಾರೆ.

ಅಂಗಾಂಗ ದಾನ ಮಹತ್ವ ಕುರಿತು ಮಾತನಾಡಿದ ಮೋದಿ, ಒಬ್ಬ ವ್ಯಕ್ತಿಯು ಮರಣದ ನಂತರ ತನ್ನ ಅಂಗಗಳನ್ನು ದಾನ ಮಾಡಿದಾಗ, ಅದು 8ರಿಂದ 9 ಜನರಿಗೆ ಹೊಸ ಜೀವನ ನೀಡಲು ಸಾಧ್ಯವಾಗುತ್ತದೆ. ಅಂಗಾಂಗ ದಾನವನ್ನು ಉತ್ತೇಜಿಸಲು, ಇಡೀ ದೇಶದಲ್ಲಿ ಇದೇ ರೀತಿಯ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವುದು ನನಗೆ ತುಂಬಾ ತೃಪ್ತಿ ತಂದಿದೆ ಎಂದಿದ್ದಾರೆ.  ಅಂಗಾಂಗ ದಾನಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಅದಕ್ಕೆ ಸಂಬಂಧಿಸಿದ ಕನಿಷ್ಠ ವಯೋಮಿತಿ ಮತ್ತು ವಾಸಸ್ಥಳ ನಿಯಮವನ್ನು ತೆಗೆದುಹಾಕಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ ?