Webdunia - Bharat's app for daily news and videos

Install App

ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ

Webdunia
ಗುರುವಾರ, 26 ಮೇ 2022 (08:02 IST)
ಬರ್ನ್ : ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.
 
ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ.

ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ.

ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ.

ಮೆ.ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments