Select Your Language

Notifications

webdunia
webdunia
webdunia
webdunia

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

Operation Sindoor, India-Pakistan border, holiday declared for schools in Punjab

Sampriya

ಪಂಜಾಬ್‌ , ಗುರುವಾರ, 8 ಮೇ 2025 (14:42 IST)
Photo Courtesy X
ಪಂಜಾಬ್‌: ಆಪರೇಷನ್‌ ಸಿಂಧೂರ್‌ ಬಳಿಕ ಭಾರತ-ಪಾಕ್‌ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಪಂಜಾಬ್‌ನ ಆರು ಗಡಿ ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪಾಕಿಸ್ತಾನವು ಭಾರತದ ಮೇಲೆ ಪ್ರತಿಕಾರದ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಅಮೃತಸರ, ಫಿರೋಜ್‌ಪುರ, ಪಠಾಣ್‌ಕೋಟ್, ಫಜಿಲ್ಕಾ, ಗುರುದಾಸಪುರ ಮತ್ತು ತರಣ್ ತರಣ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ಮೇ 11ರವರೆಗೆ ರಜೆ ಘೋಷಣೆ ಮಾಡಲಾಗಿದೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರರ ನೆಲೆಗಳ ಗುರಿಯಾಗಿಸಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಇದರಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಭಾರತೀಯ ಸೇನೆ ನಡೆಸಿದ ಕ್ಷಿಪ್ರ ದಾಳಿಯಲ್ಲಿ 70ರಿಂದ 100 ಭಯೋತ್ಪಾದಕರು ಹತರಾಗಿದ್ದಾರೆ. ಆದರೆ, ಈ ದಾಳಿಗಳಲ್ಲಿ ಕನಿಷ್ಠ 26 ಜನರು ಮೃತಪಟ್ಟಿದ್ದಾರೆ ಮತ್ತು 46 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ