ಲಖನೌ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ ಉತ್ತರ ಪ್ರದೇಶದ ಕೊಟ್ವಾಲಿಯಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿದ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಬಂಧಿತ ವ್ಯಕ್ತಿಯನ್ನು ಅನ್ವರ್ ಜಿಂದಾಬಾದ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಯಿತು.
ಬಂಧಿತನನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಅಧಿಕಾರಿ ರಾಜುಕುಮಾರ್ ಸವ್ಸಾಯಿದ್ ಹೇಳಿದ್ದಾರೆ.
ವಿಚಾರಣೆ ವೇಳೆ ಇದು ಹಳೆಯ ವಿಡಿಯೋ ಎಂದು ಜಮೀಲ್ ಹೇಳಿದ್ದಾನೆ. ತನ್ನ ಸ್ನೇಹಿತನೊಂದಿಗೆ ನಡೆದ ಬೆಟ್ಟಿಂಗ್‌ನಲ್ಲಿ ತಾನು ಈ ಘೋಷಣೆಗಳನ್ನು ಕೂಗಿದ್ದೇನೆ ಎಂದು ಅವರು ಹೇಳಿದ್ದಾರೆ.
ಹಿಂದೂ ಸಂಘಟನೆಗಳು ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಭಾರತ "ಗೌರವಾನ್ವಿತ" ರೀತಿಯಲ್ಲಿ ಸಮರ್ಥಿಸಿಕೊಂಡು ಪ್ರತಿಕ್ರಿಯಿಸಿದರೂ, ಕಳೆದ ಕೆಲವು ದಿನಗಳಿಂದ ಪಾಕಿಸ್ತಾನ "ಪ್ರಚೋದನಕಾರಿ ಮತ್ತು ಉದ್ರೇಕಕಾರಿ" ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತ ಶನಿವಾರ ಆರೋಪಿಸಿದೆ.