Select Your Language

Notifications

webdunia
webdunia
webdunia
webdunia

ಸಂಸತ್ ಚಳಿಗಾಲ ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲ: ಬುಧವಾರಕ್ಕೆ ಕಲಾಪ ಮುಂದೂಡಿಕೆ

Parliament session

Sampriya

ನವದೆಹಲಿ , ಸೋಮವಾರ, 25 ನವೆಂಬರ್ 2024 (14:57 IST)
Photo Courtesy X
ನವದೆಹಲಿ: ಇಂದು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆಯಿತು. ಹೀಗಾಗಿ, ಲೋಕಸಭೆ ಮತ್ತು ರಾಜ್ಯಸಭೆಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.

ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು ಮಂಡಿಸಲು ಮುಂದಾಗಿತ್ತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತರಾತರಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಪ್ರತಿಪಕ್ಷಗಳು ಯಾವುದೇ ಮಸೂದೆ ಮಂಡನೆ ಮಾಡುವ ಮುನ್ನ ಮಣಿಪುರದಲ್ಲಿ ಮರುಕಳಿಸಿರುವ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಗದ್ಧಲ ಸೃಷ್ಟಿಸಿದ್ದರಿಂದ ಸಭಾಪತಿ ಕಲಾಪವನ್ನು ಮುಂದೂಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ, ಬೊಮ್ಮಾಯಿ ಅವಧಿಯಲ್ಲೇ ಹೆಚ್ಚು ವಕ್ಫ್ ನೋಟಿಸ್: ಬಿಜೆಪಿ ವಿರುದ್ಧ ಪರಮೇಶ್ವರ ಗರಂ