Publish Date: Wed, 06 Mar 2024 (18:00 IST)
Updated Date: Wed, 06 Mar 2024 (18:22 IST)
ಸ್ಪೇನ್ -ಸ್ಪೇನ್ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಜಾರ್ಖಂಡ್‌ನ ಪಲಮು ಎಂಬ ಜಿಲ್ಲೆಯಲ್ಲಿ ಆರ್ಕೆಸ್ಟ್ರಾ ಕಲಾವಿದೆಯೊಬ್ಬರ ಮೇಲೆ ಮೂವರು ಸಾಮೂಹಿತ ಅತ್ಯಾಚಾರ ಎಸಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಸೆರೆ ಹಿಡಿದಿದ್ದು, ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದಾರೆ.
ಪಲಮುವಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂತ್ರಸ್ತ ಕಲಾವಿದೆ ಮತ್ತು ಆಕೆಯ ಸಹೋದರಿ ಭಾಗವಹಿಸಿದ್ದರು. ಕಾರ್ಯಕ್ರಮ ರದ್ದಾಗಿದೆ ಎಂದು ನೆಪವೊಡ್ಡಿ ಮನೆಗೆ ಕರೆದೊಯ್ದು ಕಲಾವಿದೆಗೆ ಮದ್ಯ ಬೆರೆಸಿ ಕುಡಿಯಲು ನೀಡಿ ಹೇಯ ಕೃತ್ಯ ಎಸಗಲಾಗಿದೆ.
ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಪತಿ ಜಾರ್ಖಂಡ್ ಮತ್ತು ದುಮ್ಕಾ ಪೊಲೀಸರು ಕೈಗೊಂಡ ತ್ವರಿತ ಕ್ರಮದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಆರೋಪಿಗಳನ್ನೂ ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದು ಸಂತ್ರಸ್ತೆಯ ಪತಿ ಜಾರ್ಖಂಡ್ ಸರ್ಕಾರ ಮತ್ತು ಪೊಲೀಸರಿಗೆ ಇದುವರೆಗೆ ತೆಗೆದುಕೊಂಡ ಕ್ರಮಗಳಿಗಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಮಾರ್ಚ್ 1 ರ ರಾತ್ರಿ ದುಮ್ಕಾ ಜಿಲ್ಲೆಯ ಹನ್ಸಿದಿಹಾ ಪೊಲೀಸ್ ಠಾಣೆ ವ್ತಾಪ್ತಿಯಲ್ಲಿ ಸ್ಪೇನ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಏಳು ಮಂದಿ ಆರೋಪಿಗಳು ಸೇರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ಮತ್ತು ಆಕೆಯ ಪತಿಯನ್ನು ಹೊಡೆದು ಕಟ್ಟಿ ಹಾಕಿ ದೌರ್ಜನ್ಯ ಎಸಗಿದ್ದರು. ತಡರಾತ್ರಿ, ಹನ್ಸಿದಿಹಾ ಪೊಲೀಸರು ಸಂತ್ರಸ್ತ ದಂಪತಿಗಳನ್ನು ರಸ್ತೆಬದಿಯಲ್ಲಿ ಗುರುತಿಸಿ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಅವರನ್ನು ಉತ್ತಮ ಚಿಕಿತ್ಸೆಗಾಗಿ ದುಮ್ಕಾದ ಫುಲೋಜಾನೋ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.