ಆರ್ಕೆಸ್ಟ್ರಾ ಕಲಾವಿದೆಯ ಮೇಲೆ ಸಾಮೂಹಿಕ ಅತ್ಯಾಚಾರ

geetha
ಬುಧವಾರ, 6 ಮಾರ್ಚ್ 2024 (18:00 IST)
ಸ್ಪೇನ್ -ಸ್ಪೇನ್‌ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಜಾರ್ಖಂಡ್‌ನ‌ ಪಲಮು ಎಂಬ ಜಿಲ್ಲೆಯಲ್ಲಿ ಆರ್ಕೆಸ್ಟ್ರಾ ಕಲಾವಿದೆಯೊಬ್ಬರ ಮೇಲೆ ಮೂವರು ಸಾಮೂಹಿತ ಅತ್ಯಾಚಾರ ಎಸಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಸೆರೆ ಹಿಡಿದಿದ್ದು, ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದಾರೆ.
 
ಪಲಮುವಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂತ್ರಸ್ತ ಕಲಾವಿದೆ ಮತ್ತು ಆಕೆಯ ಸಹೋದರಿ ಭಾಗವಹಿಸಿದ್ದರು. ಕಾರ್ಯಕ್ರಮ ರದ್ದಾಗಿದೆ ಎಂದು ನೆಪವೊಡ್ಡಿ ಮನೆಗೆ ಕರೆದೊಯ್ದು ಕಲಾವಿದೆಗೆ ಮದ್ಯ ಬೆರೆಸಿ ಕುಡಿಯಲು ನೀಡಿ ಹೇಯ ಕೃತ್ಯ ಎಸಗಲಾಗಿದೆ.
 
ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಪತಿ ಜಾರ್ಖಂಡ್ ಮತ್ತು ದುಮ್ಕಾ ಪೊಲೀಸರು ಕೈಗೊಂಡ ತ್ವರಿತ ಕ್ರಮದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಆರೋಪಿಗಳನ್ನೂ ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದು ಸಂತ್ರಸ್ತೆಯ ಪತಿ ಜಾರ್ಖಂಡ್ ಸರ್ಕಾರ ಮತ್ತು ಪೊಲೀಸರಿಗೆ ಇದುವರೆಗೆ ತೆಗೆದುಕೊಂಡ ಕ್ರಮಗಳಿಗಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
 
ಮಾರ್ಚ್ 1 ರ ರಾತ್ರಿ ದುಮ್ಕಾ ಜಿಲ್ಲೆಯ ಹನ್ಸಿದಿಹಾ ಪೊಲೀಸ್ ಠಾಣೆ ವ್ತಾಪ್ತಿಯಲ್ಲಿ ಸ್ಪೇನ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಏಳು ಮಂದಿ ಆರೋಪಿಗಳು ಸೇರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ಮತ್ತು ಆಕೆಯ ಪತಿಯನ್ನು ಹೊಡೆದು ಕಟ್ಟಿ ಹಾಕಿ ದೌರ್ಜನ್ಯ ಎಸಗಿದ್ದರು. ತಡರಾತ್ರಿ, ಹನ್ಸಿದಿಹಾ ಪೊಲೀಸರು ಸಂತ್ರಸ್ತ ದಂಪತಿಗಳನ್ನು ರಸ್ತೆಬದಿಯಲ್ಲಿ ಗುರುತಿಸಿ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಅವರನ್ನು ಉತ್ತಮ ಚಿಕಿತ್ಸೆಗಾಗಿ ದುಮ್ಕಾದ ಫುಲೋಜಾನೋ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments