Publish Date: Sun, 18 Jun 2023 (12:06 IST)
Updated Date: Sun, 18 Jun 2023 (12:08 IST)
ನವದೆಹಲಿ : ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧವೂ ಅಲ್ಲ, ಬ್ರಿಜ್ ಭೂಷಣ್ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ ಎಂದು ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹಾಗೂ ಪತಿ ಸತ್ಯವರ್ತ್ ಕಡಿಯಾನ್ ಹೇಳಿದ್ದಾರೆ.
ರಾಜಕೀಯ ಪ್ರೇರಿತವೆಂಬ ಟೀಕೆಗಳಿಗೆ ಗುರಿಯಾಗಿದ್ದ ತಮ್ಮ ಹೋರಾಟದ ಬಗ್ಗೆ ಕುಸ್ತಿಪಟುಗಳು ಸ್ಪಷ್ಟನೆ ನೀಡಿದ್ದಾರೆ. WಈI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಹೊರಿಸಿ ಹಲವು ದಿನಗಳಿಂದ ಕುಸ್ತಿಪಟುಗಳು ಹೋರಾಟ ನಡೆಸುತ್ತಿದ್ದರು. ದೆಹಲಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ,
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸೇರಿದಂತೆ ಹಲವು ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಆರೋಪಿಸಲಾಗಿತ್ತು. ಈ ಕುರಿತು 11 ನಿಮಿಷಗಳ ಸುದೀರ್ಘ ವೀಡಿಯೋ ಹಂಚಿಕೊಂಡಿರುವ ಸಾಕ್ಷಿ ಮಲಿಕ್ ತಮ್ಮ ಹೋರಾಟದ ಕುರಿತು ಸ್ಪಷ್ಟನೆ ನೀಡಿದ್ದಾರೆ.