Publish Date: Tue, 31 May 2022 (12:49 IST)
Updated Date: Tue, 31 May 2022 (15:18 IST)
ನವದೆಹಲಿ : ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧನ ರಾಜಕೀಯ ಪ್ರೇರಿತ.
ಅವರನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗಿದೆ ಮತ್ತು ಇದು ಸಂಪೂರ್ಣ ವಂಚನೆಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಸತ್ಯೇಂದ್ರ ಜೈನ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಅವರು, ಆಮ್ ಅದ್ಮಿ ಪಕ್ಷವು ಭ್ರಷ್ಟಾಚಾರವನ್ನು ಸಹಿಸಿಕೊಳ್ಳುವುದಿಲ್ಲ ಮತ್ತು ತೊಡಗಿಕೊಳ್ಳುವುದಿಲ್ಲ.
ನಮ್ಮದು ಅತ್ಯಂತ ಪ್ರಾಮಾಣಿಕ ಸರ್ಕಾರ ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದರು.