Publish Date: Fri, 11 Mar 2022 (07:43 IST)
Updated Date: Fri, 11 Mar 2022 (03:45 IST)
ಬೆಂಗಳೂರು : ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆಯಾಗಿದೆ.
ಭರ್ಜರಿ ಬಹುಮತದೊಂದಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂತೋಷ ವ್ಯಕ್ತಪಡಿಸಿದರು.
ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ಸಮಾಜವಾದಿ ಪಕ್ಷವನ್ನು ಜನರು ಸಂಪೂರ್ಣವಾಗಿ ನಂಬಿಲ್ಲ. ಮಣಿಪುರ, ಉತ್ತರಾಖಂಡ ಹಾಗೂ ಗೋವಾ ರಾಜ್ಯಗಳಲ್ಲಿ ಕೂಡ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ.
ಕಾಂಗ್ರೆಸ್ ಪಕ್ಷ ಅವನತಿಯ ಘಟ್ಟ ತಲುಪಿದೆ. ಐದು ರಾಜ್ಯಗಳಲ್ಲಿಯೂ ಕೈ ಹೀನಾಯ ಸೋಲು ಕಂಡಿದೆ. ಕಾಂಗ್ರೆಸ್ ಬಿಜೆಪಿಗೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲೂ ಕೂಡ ಪರ್ಯಾಯ ಪಕ್ಷವಲ್ಲ ಎಂದು ಸಾಬೀತು ಆಗಿದೆ.
ಮತದಾರ ಪ್ರಭುಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ, ವಂಶಪಾರಂಪರ್ಯ ರಾಜಕೀಯಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಟೀಕಿಸಿದರು.