Publish Date: Sun, 27 Nov 2022 (13:42 IST)
Updated Date: Sun, 27 Nov 2022 (13:44 IST)
ಗಾಂಧಿನಗರ : ದೇಶದಲ್ಲೇ ನೀವು ಅಪಖ್ಯಾತಿ ಹೊಂದಿದ್ದೀರಿ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ.
ಶುಕ್ರವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ `2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ ತಕ್ಕ ಪಾಠ ಕಲಿಸಿತು ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ.