Select Your Language

Notifications

webdunia
webdunia
webdunia
webdunia

ಬಹು ಮಹಡಿಯಿಂದ ಬಿದ್ದು ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!

ಬಹು ಮಹಡಿಯಿಂದ ಬಿದ್ದು ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!
ಚಂಡೀಗಢ , ಶನಿವಾರ, 11 ಮಾರ್ಚ್ 2023 (09:23 IST)
ಚಂಡೀಗಢ : ಗಗನಚುಂಬಿ ಕಟ್ಟಡದ 20ನೇ ಮಹಡಿಯಿಂದ ಬಿದ್ದು, ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅವರು ಮೃತಪಟ್ಟಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಶುಕ್ರವಾರ ನಡೆದಿದೆ.
 
ಗುರುಗ್ರಾಮದ ಸೆಕ್ಟರ್ 54ರಲ್ಲಿರುವ ಡಿಎಲ್ಎಫ್ನ ದಿ ಕ್ರೆಸ್ಟ್ ಸೊಸೈಟಿಯ 20ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ ಎಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಎಲ್ಎಫ್ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.

ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಘಟನಾ ಸ್ಥಳದಲ್ಲಿ ಪರಿಶೀಲನೆ ವೇಳೆ, ಕಟ್ಟಡದ ಮೇಲಿನಿಂದ ಬಿದ್ದ ವ್ಯಕ್ತಿ ರಮೇಶ್ ಪ್ರಸಾದ್ ಅಗರ್ವಾಲ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರಮೇಶ್ ಅಗರವಾಲ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್