Select Your Language

Notifications

webdunia
webdunia
webdunia
webdunia

ಯೋಗದಿಂದಲೇ 128 ವರ್ಷ ಬದುಕಿದ್ದ ಪದ್ಮಶ್ರೀ ಪುರಸ್ಕೃತ ಗುರು ಸ್ವಾಮಿ ಶಿವಾನಂದ ಬಾಬಾ ಇನ್ನಿಲ್ಲ

Yoga guru Swami Shivanand Baba, President Ram Nath Kovind, Uttar Pradesh Chief Minister Yogi Adityanath

Sampriya

ವಾರಾಣಸಿ , ಭಾನುವಾರ, 4 ಮೇ 2025 (11:28 IST)
Photo Courtesy X
ವಾರಾಣಸಿ: ಯೋಗಕ್ಕಾಗಿಯೇ ಜೀವನವನ್ನು ಮುಡಿಪಾಗಿಟ್ಟಿದ್ದ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಅವರಿಗೆ 2022ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ‌

ವಾರಾಣಸಿಯ ಬಿಎಚ್‌ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ ಅವರು ನಿಧನರಾಗಿದ್ದು, ಭಾನುವಾರ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಶಿವಾನಂದ ಅವರ ನಿಧನಕ್ಕೆ ಸಂತಾಪ ಸೂಚಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಕಾಶಿಯ ಹೆಸರಾಂತ ಯೋಗ ಗುರು ಪದ್ಮಶ್ರೀ ಸ್ವಾಮಿ ಶಿವಾನಂದ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ನಿಮ್ಮ ಆಧ್ಯಾತ್ಮಿಕ ಅಭ್ಯಾಸ ಮತ್ತು ಯೋಗ ಜೀವನವು ಇಡೀ ಸಮಾಜಕ್ಕೆ ಒಂದು ಸ್ಫೂರ್ತಿಯಾಗಿದೆ. ನೀವು ನಿಮ್ಮ ಇಡೀ ಜೀವನವನ್ನು ಯೋಗದ ಅಭ್ಯಾಸಕ್ಕಾಗಿ ಮುಡಿಪಾಗಿಟ್ಟಿದ್ದೀರಿ. ಅಗಲಿದ ಆತ್ಮಕ್ಕೆ ಮೋಕ್ಷ ಸಿಗಲಿ, ಅವರ ದುಃಖಿತ ಅನುಯಾಯಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ನಾನು ಬಾಬಾ ವಿಶ್ವನಾಥರನ್ನು ಪ್ರಾರ್ಥಿಸುತ್ತೇನೆ ಎಂದು ಯೋಗಿ ಆದಿತ್ಯನಾಥ ಬರೆದುಕೊಂಡಿದ್ದಾರೆ.

ಬಾಂಗ್ಲಾದೇಶದ ಸಿಲ್ಹೆಟ್ ಜಿಲ್ಲೆಯಲ್ಲಿ ಆ. 8, 1896 ರಂದು ಜನಿಸಿದ್ದ ಬಾಬಾ ಶಿವಾನಂದ ಅವರು ಆರು ವರ್ಷದವನಿದ್ದಾಗ ಹಸಿವಿನಿಂದ ತಮ್ಮ ಹೆತ್ತವರನ್ನು ಕಳೆದುಕೊಂಡರು. ಅಂದಿನಿಂದ, ಅವರು ಕಠಿಣ ಮತ್ತು ಶಿಸ್ತಿನ ಜೀವನವನ್ನು ನಡೆಸಿದರು, ಅರ್ಧ ಹೊಟ್ಟೆ ಆಹಾರವನ್ನು ಸೇವಿಸುತ್ತಿದ್ದರು. ಅವರ ಹೆತ್ತವರು ಮೃತಪಟ್ಟ ಬಳಿಕ, ಓಂಕಾರಾನಂದ ಸ್ವಾಮಿ ಅವರಿಂದ ಶಿವಾನಂದ ಅವರು ಆಧ್ಯಾತ್ಮಿಕ ಶಿಕ್ಷಣ ಮತ್ತು ಜೀವನ ಬೋಧನೆಗಳನ್ನು ಪಡೆದರು.

Share this Story:

Follow Webdunia kannada

ಮುಂದಿನ ಸುದ್ದಿ

Karanatakaa Today Weather: ರಾಜ್ಯದ ಇಂದಿನ ಹವಾಮಾನದಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ